ಮೈಸೂರು: ‘ತನ್ನ ವೈಯಕ್ತಿಕ ದೌರ್ಬಲ್ಯಗಳ ಕಾರಣಕ್ಕಾಗಿ ನೈತಿಕತೆ ಬದಿಗಿಟ್ಟು ಗಾಳಿ ಬಂದ ಕಡೆ ತೂರಿಕೊಳ್ಳುವ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಬಗ್ಗೆ ಟೀಕಿಸುವುದು ಸರಿಯಲ್ಲ’ ಎಂದು ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಹೇಳಿದ್ದಾರೆ.

‘ಕುಮಾರಸ್ವಾಮಿ ಎಂದೂ ಬಹುಮತದಿಂದ ಆಯ್ಕೆಯಾದ ಸರ್ಕಾರದಲ್ಲಿ ಮುಖ್ಯಮಂತ್ರಿ ಆಗಿಲ್ಲ, ನಾನೊಬ್ಬ ಪರಿಸ್ಥಿತಿಯ ಶಿಶು ಎಂದು ಹಲವು ಬಾರಿ ಹೇಳಿಕೊಂಡಿದ್ದಾರೆ. ಇದರರ್ಥ ತಾನೊಬ್ಬ ಅವಕಾಶವಾದಿ; ಗಾಳಿ ಬಂದಾಗ ತೂರಿಕೊಳ್ಳುವ ಮನಸ್ಥಿತಿಯವನು ಎನ್ನುವುದೇ ಆಗಿದೆ. ಗಾಜಿನ ಮನೆಯಲ್ಲಿ ಕುಳಿತವರು ಇನ್ನೊಬ್ಬರ ಮೇಲೆ ಕಲ್ಲೆಸುವುದಕ್ಕೂ ಮೊದಲು ಆಲೋಚಿಸುವುದು ಒಳಿತು’ ಎಂದು ಪ್ರಕಟಣೆಯಲ್ಲಿ ಸಲಹೆ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-39-1382986933

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.