ಬೆಂಗಳೂರು: ‘ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಮಂಚದಡಿ ಚಿರತೆ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ ಹೊರಗೆ ಕರೆತಂದ ಸುಜಾತಾ ಅವರಿಗೆ ಮುಂದಿನ ವರ್ಷದ ಕಿತ್ತೂರು ರಾಣಿ ಚೆನ್ನಮ್ಮ ಸಾಹಸ ಪ್ರಶಸ್ತಿ ನೀಡಲಾಗುವುದು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಭರವಸೆ ನೀಡಿದ್ದಾರೆ.

‘ಈ ಘಟನೆ ಆಕಸ್ಮಿಕವಾದರೂ, ಅದು ಮಹಿಳೆಯೊಬ್ಬರ ಅಪ್ರತಿಮ ಧೈರ್ಯ ಮತ್ತು ಅತ್ತೆ-ಸೊಸೆಯ ಪವಿತ್ರ ಬಾಂಧವ್ಯಕ್ಕೆ ಹಿಡಿದ ಕನ್ನಡಿಯಾಗಿದೆ. ತಮ್ಮ ಮನೆಯ ಮಂಚದಡಿ ಚಿರತೆ ಅಡಗಿರುವುದು ತಿಳಿಯುತ್ತಿದ್ದಂತೆಯೇ,ಪ್ರಾಣದ ಹಂಗು ತೊರೆದು ಕೊಠಡಿಗೆ ನುಗ್ಗಿ, ವಯಸ್ಸಾದ ಅತ್ತೆಯನ್ನು ಸುರಕ್ಷಿತವಾಗಿ ಹೊರಗೆ ಕರೆತಂದ ಸುಜಾತಾ ಅವರ ಸಾಹಸ ನಿಜಕ್ಕೂ ರೋಮಾಂಚನಕಾರಿಯಾಗಿದೆ.ಅತ್ತೆಯನ್ನು ರಕ್ಷಿಸಿದ ಅವರ ಸಮಯಪ್ರಜ್ಞೆ ಇಡೀ ಮಹಿಳಾ ಕುಲಕ್ಕೆ ಹೆಮ್ಮೆಯ ವಿಷಯವಾಗಿದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-51-767764168

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.