ಮೈಸೂರು: ‘ರಾಜ್ಯದಲ್ಲಿ ಕನ್ನಡ ಭಾಷೆ ಸಂಪೂರ್ಣವಾಗಿ ಕಡೆಗಣಿಸಲಾಗುತ್ತಿದ್ದು, ರಾಜ್ಯಪಾಲರ ಲೋಕಭವನವೇ ಕನ್ನಡ ವಿರೋಧಿಯಾಗಿದೆ’ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ವಿಷಾದ ವ್ಯಕ್ತಪಡಿಸಿದರು.

ಇಲ್ಲಿನ ಹಾರ್ಡಿಂಜ್ ವೃತ್ತದಲ್ಲಿ ಭಾನುವಾರ ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ, ಕನ್ನಡ ಭಾಷೆ ಕಡೆಗಣನೆ ಹಾಗೂ ಸಿದ್ದರಾಮಯ್ಯ ರಾಜೀನಾಮೆ ಖಂಡಿಸಿ ಪ್ರತಿಭಟನೆ ನಡೆಸಿ ಮಾತನಾಡಿದರು.

‘ಕಾಸರಗೋಡು, ಮಡಕಶಿರಾ, ತಾಳವಾಡಿ, ಹೊಸೂರು, ಸೊಲ್ಲಾಪುರ ಮತ್ತು ಅಕ್ಕಲಕೋಟೆ ಮುಂತಾದ ಗಡಿ ಪ್ರದೇಶಗಳಲ್ಲಿನ ಕನ್ನಡ ಶಾಲೆಗಳ ಮೇಲೆ ಹೊರರಾಜ್ಯದವರು ದಾಳಿ ನಡೆಸುತ್ತಿದ್ದಾರೆ. ಗಡಿನಾಡಿನಿಂದ ಬಂದ ಜನರಿಗೆ ಗೌರವ, ಅವಕಾಶಗಳನ್ನು ನೀಡುತ್ತಿಲ್ಲ. ಲೋಕಭವನದಲ್ಲಿನ ವ್ಯವಹಾರಗಳೂ ಇಂಗ್ಲಿಷ್ ಅಥವಾ ಹಿಂದಿ ಭಾಷೆಯಲ್ಲಿರುತ್ತದೆ’ ಎಂದು ದೂರಿದರು.

ತೀವ್ರ ಸಂಕಷ್ಟ: ಇಂಧನ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ದೇಶದಲ್ಲೇ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ. ಜನರು ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಬೆಲೆ ಏರಿಕೆಗೆ ಕಡಿವಾಣ ಹಾಕುವ ಜನಪರ ಆಡಳಿತ ಜಾರಿಯಾಗಬೇಕು ಎಂದು ಆಗ್ರಹಿಸಿದರು.

‘ಸಿದ್ದರಾಮಯ್ಯ ಪ್ರಬುದ್ಧ ರಾಜಕಾರಣಿ. ಅವರು, ರಾಜೀನಾಮೆ ಕೊಡಬಾರದಿತ್ತು. ಈ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಗೌರವವಾಗಿ ನಡೆಸಿಕೊಳ್ಳದೇ ಬಲವಂತಾಗಿ ರಾಜೀನಾಮೆ ಪಡೆದಿದೆ’ ಎಂದರು.

ಕನ್ನಡ ಹೋರಾಟಗಾರ ಮೂಗೂರು ನಂಜುಂಡಸ್ವಾಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-51-771944146

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.