ಬೆಂಗಳೂರು: ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಪ್ರಭಾರ ಮುಖ್ಯ ಮಾಹಿತಿ ಆಯುಕ್ತರಾಗಿ ನಿವೃತ್ತಿ ಹೊಂದಿರುವ ಎಚ್.ಸಿ.ಸತ್ಯನ್ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ನಾಡೋಜ ಪದವಿ ಪ್ರದಾನ ಮಾಡಿರುವುದನ್ನು ಪ್ರಶ್ನಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಹೈಕೋರ್ಟ್ ವಜಾಗೊಳಿಸಿದೆ.

‘ಕಮಿಟಿ ಫಾರ್ ಪಬ್ಲಿಕ್ ಅಕೌಂಟೆಬಿಲಿಟಿ’ ಸಂಸ್ಥೆಯ ಅಧ್ಯಕ್ಷ ಎಸ್.ಶಿವಕುಮಾರ್ ಸಲ್ಲಿಸಿದ್ದ ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ‘ಸತ್ಯನ್ ಅವರ ಮೇಲೆ ಭ್ರಷ್ಟಾಚಾರದ ಆರೋಪ ಇದೆ’ ಎಂದರು. ಇದಕ್ಕೆ ಪೀಠವು ’ಆರೋಪ ಸಾಬೀತಾಗಿದೆಯಾ? ಸುಮ್ಮನೆ ಆರೋಪ ಸಾಬೀತಾಗಿಲ್ಲ ಎಂದರೆ ದೊಡ್ಡ ಮೊತ್ತದ ದಂಡ ವಿಧಿಸಬೇಕಾದೀತು’ ಎಂದು ಎಚ್ಚರಿಸಿತು.

‘ಯಾರಿಗೆ ಯಾವ ಪದವಿ ಕೊಡಬೇಕು ಎಂಬುದನ್ನು ನಿರ್ಧರಿಸಲು ವಿಶ್ವವಿದ್ಯಾಲಯ ಸ್ವತಂತ್ರವಾಗಿದೆ. ಇಂತಹ ವಿಷಯದಲ್ಲಿ ನ್ಯಾಯಾಲಯ ಮಧ್ಯ ಪ್ರವೇಶಿಸಲು ಬಯಸುವುದಿಲ್ಲ’ ಎಂದು ಪೀಠ ಹೇಳಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-4-1499224586

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.