ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಾಗಮಂಗಲ ಗಲಭೆ | ನಿಷೇಧಿತ ಸಂಘಟನೆಗಳ ಕೈವಾಡ: ಆರ್. ಅಶೋಕ

Published : 16 ಸೆಪ್ಟೆಂಬರ್ 2024, 15:35 IST
Last Updated : 16 ಸೆಪ್ಟೆಂಬರ್ 2024, 15:35 IST
ಫಾಲೋ ಮಾಡಿ
Comments

ಬೆಂಗಳೂರು: ನಾಗಮಂಗಲ ಘಟನೆಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡ ಇರುವ ಅನುಮಾನವಿದ್ದು, ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಒಪ್ಪಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಒತ್ತಾಯಿಸಿದರು.

ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಿಸಿದ ಘಟನೆ ಹಾಗೂ ಮಂಗಳೂರಿನ ಕೋಮುಗಲಭೆ ಪ್ರಕರಣಗಳನ್ನೂ ಎನ್‌ಐಎ ತನಿಖೆಗೆ ವಹಿಸಬೇಕು’ ಎಂದು ಆಗ್ರಹಿಸಿದರು.

‘ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಾಗ ಈ ಸರ್ಕಾರ ಯಾರನ್ನೂ ಬಂಧಿಸಿಲ್ಲ. ಆದರೆ, ಶಾಸಕ ಮುನಿರತ್ನ ವಿಚಾರದಲ್ಲಿ ತಕ್ಷಣ ಬಂಧಿಸಲಾಗಿದೆ. ಸಂಭಾಷಣೆಯ ಆಡಿಯೊವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಹಿಸುವ ಮೊದಲೇ ಬಂಧಿಸಿ, ರಾಜಕಾರಣ ಮಾಡುತ್ತಿದ್ದಾರೆ’ ಎಂದು ದೂರಿದರು.

‘ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ನಾಟಕದ ಕಂಪನಿ ನಡೆಸುತ್ತಿದ್ದಾರೆ. ಇವರು ಅಪರಾಧಿ ಎಂದು ಸಾಬೀತಾಗುವ ಮೊದಲೇ ರಾಜೀನಾಮೆ ಕೊಡುವ ನಾಟಕವಾಡುತ್ತಿದ್ದಾರೆ’ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT