ನವದೆಹಲಿ: ನಂಜನಗೂಡು– ನಿಲಂಬೂರು ರೈಲು ಮಾರ್ಗ ನಿರ್ಮಾಣಕ್ಕೆ ಹೊಸದಾಗಿ ಅಂತಿಮ ಸ್ಥಳ ಸಮೀಕ್ಷೆ ನಡೆಸಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು.

ಲೋಕಸಭೆಯಲ್ಲಿ ಬುಧವಾರ ಪ್ರಶ್ನೋತ್ತರ ಅವಧಿಯಲ್ಲಿ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ‘ರೈಲ್ವೆ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕ್ಷೇತ್ರ ಸಮೀಕ್ಷೆ ಪೂರ್ಣಗೊಂಡಿದೆ’ ಎಂದರು.

‘ಈ ಮಾರ್ಗ ನಿರ್ಮಾಣಕ್ಕೆ 2007–08ರಲ್ಲಿ ಸಮೀಕ್ಷೆ ಕೈಗೆತ್ತಿಕೊಳ್ಳಲಾಗಿತ್ತು. ಪ್ರಯಾಣಿಕರ ದಟ್ಟಣೆ ಕಡಿಮೆ ಇರಲಿದ್ದು, ಯೋಜನೆ ಅನುಷ್ಠಾನ ಕಾರ್ಯಸಾಧುವಲ್ಲ ಎಂದು ಸಮೀಕ್ಷೆ ವರದಿ ತಿಳಿಸಿತ್ತು. ಹೀಗಾಗಿ, ಯೋಜನೆ ಕೈಗೆತ್ತಿಕೊಂಡಿರಲಿಲ್ಲ’ ಎಂದರು.

236 ಕಿ.ಮೀ ಉದ್ದದ ಮಾರ್ಗದ ಈ ಯೋಜನೆಯು ಕರ್ನಾಟಕ, ತಮಿಳುನಾಡು ಹಾಗೂ ಕೇರಳವನ್ನು ಸಂಪರ್ಕಿಸುತ್ತದೆ. ಕರ್ನಾಟಕದ ಬಂಡೀಪುರ, ತಮಿಳುನಾಡಿನ ಮುಧುಮಲೆ ಹಾಗೂ ಕೇರಳದ ವಯನಾಡ್ ಸಂರಕ್ಷಿತ ಅರಣ್ಯ ಪ್ರದೇಶದ ಮೂಲಕ ಈ ಮಾರ್ಗ ಹಾದು ಹೋಗುತ್ತದೆ. ಹಾಗಾಗಿ, ಈ ಯೋಜನೆಗೆ ಕರ್ನಾಟಕ ಸರ್ಕಾರ ವಿರೋಧ ವ್ಯಕ್ತಪಡಿಸಿದೆ.

ಬ್ರಾಡ್ಗೇಜ್ ಮಾರ್ಗಕ್ಕೆ ಡಿಪಿಆರ್

ಬಳ್ಳಾರಿ ಸಂಸದ ಇ.ತುಕಾರಾಂ ಪ್ರಶ್ನೆಗೆ ಉತ್ತರ ನೀಡಿರುವ ಅಶ್ವಿನಿ ವೈಷ್ಣವ್, ‘ಬಳ್ಳಾರಿಯ ಸ್ವಾಮಿಹಳ್ಳಿ ಹಾಗೂ ಆಂಧ್ರ ಪ್ರದೇಶದ ರಾಯದುರ್ಗ ನಡುವೆ ಬ್ರಾಡ್ಗೇಜ್ ರೈಲು ಮಾರ್ಗ ನಿರ್ಮಾಣಕ್ಕೆ ಅಂತಿಮ ಸ್ಥಳ ಸಮೀಕ್ಷೆ ನಡೆಸಲಾಗಿದ್ದು, ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.