ಮಂಡ್ಯ: ಕರ್ನಾಟಕ ಸಂಘದ ವತಿಯಿಂದ ನೀಡಲಾಗುವ ಕೆ.ಸಿಂಗಾರಿಗೌಡ ಪುಸ್ತಕ ಪ್ರಶಸ್ತಿಗೆ ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ, ಡಾ.ರಾಗೌ ಸಾಹಿತ್ಯ ಪ್ರಶಸ್ತಿಗೆ ಸಾಹಿತಿ ಡಾ.ಪಿ.ಕೆ.ರಾಜಶೇಖರ್ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯ ತಲಾ ₹ 15 ಸಾವಿರ ನಗದು, ಪ್ರಶಸ್ತಿ ಫಲಕ ಒಳಗೊಂಡಿದೆ. ಏ. 14ರಂದು ನಗರದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ ತಿಳಿಸಿದ್ದಾರೆ.