ನರಸಿಂಹರಾಜಪುರ: ‘ಪಕ್ಷನಿಷ್ಠೆ ಇದ್ದರೆ ಒಂದಲ್ಲ ಒಂದು ದಿನ ಅಧಿಕಾರ ಒಲಿದು ಬರುತ್ತದೆ ಎಂಬುದಕ್ಕೆ ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿದರ್ಶನ’ ಎಂದು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಡಾ.ಕೆ.ಪಿ. ಅಂಶುಮಂತ್ ಹೇಳಿದರು.

ನಿಯೋಜಿತ ಮುಖ್ಯಮಂತ್ರಿಯಾಗಿ ಶಿವಕುಮಾರ್ ಘೋಷಣೆಯಾದ ಸಂಬಂಧ ತಾಲ್ಲೂಕು ಯುವಕಾಂಗ್ರೆಸ್ ಘಟಕದಿಂದ ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಆಯೋಜಿಸಿದ್ದ ಸಂಭ್ರಮಾಚರಣೆಯಲ್ಲಿ ಅವರು ಮಾತನಾಡಿದರು.

ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಹಂತ, ಹಂತವಾಗಿ ಬೆಳೆದು ಬಂದು ಮುಖ್ಯಮಂತ್ರಿಯಾಗುತ್ತಿರುವುದು ಎಲ್ಲರಿಗೂ ಸಂಭ್ರಮ ತಂದಿದೆ ಎಂದರು.

ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಪ್ರಶಾಂತ್ ಎಲ್. ಶೆಟ್ಟಿ ಮಾತನಾಡಿ, ನಿಷ್ಠಾವಂತ ಕಾರ್ಯಕರ್ತರಾಗಿರುವ ಡಿ.ಕೆ. ಶಿವಕುಮಾರ್ ಅವರಿಗೆ ಸೂಕ್ತ ಸ್ಥಾನ ದೊರೆತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸಂಕಷ್ಟದಲ್ಲಿದ್ದಾಗ ಬೆಂಬಲವಾಗಿ ನಿಂತು ಪಕ್ಷವನ್ನು ಪ್ರಬಲವಾಗಿ ಬೆಳೆಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.

ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷೆ ಜುಬೇದಾ ಮಾತನಾಡಿ, ಶಿವಕುಮಾರ್ ಯುವಕರ ಕಣ್ಮಣಿ. ಇನ್ನು ಮುಂದೆ ರಾಜ್ಯದಲ್ಲಿ ಹೊಸ ಪರ್ವ ಪ್ರಾರಂಭವಾಗಲಿದೆ ಎಂದರು.

ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಜಿತ್ ದಂಡಿನಮಕ್ಕಿ ಹಾಗೂ ಕಾರ್ಯದರ್ಶಿ ಕೌಶಿಕ್ ಮಾತನಾಡಿದರು.

ತಾಲ್ಲೂಕು ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ರತನ್ ಗೌಡ ಅರಗಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಕ್ಷಿರಾ, ತಾಲ್ಲೂಕು ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್, ಮುಖಂಡರಾದ ಬಿಳಾಲ್ಮನೆ ಉಪೇಂದ್ರ, ದೇವಂತರಾಜ್ ಗೌಡ, ಕರುಗುಂದ ನಂದೀಶ್, ಆದರ್ಶ, ಇಂದಿರಾ ನಗರ ರಘು, ಸೈಯದ್ ವಸೀಂ, ಅನಿದ್, ಗಫಾರ್ ಕ್ಸೇವಿಯಾರ್ ಭಾಗವಹಿಸಿದ್ದರು. ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-126-1997395426

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.