ಬೆಂಗಳೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಅವರನ್ನು ಸರ್ಕಾರ ನಾಮನಿರ್ದೇಶನ ಮಾಡಿದೆ.

ಈ ಬಗ್ಗೆ ಫೆಬ್ರುವರಿ 5ರಂದು ಅಧಿಸೂಚನೆ ಹೊರಡಿಸಲಾಗಿದೆ. ತಕ್ಷಣದಿಂದ ಆದೇಶ ಜಾರಿಯಾಗಲಿದ್ದು, ಮುಂದಿನ ಮೂರು ವರ್ಷದವರೆಗೆ ಅಧ್ಯಕ್ಷರ ಅವಧಿ ಇರಲಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ಕ್ಷೇತ್ರದ ನರೇಂದ್ರ ಸ್ವಾಮಿ ಅವರು, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಬುಧವಾರ ರಾತ್ರಿ 9 ಗಂಟೆಗೆ ಅಧಿಕಾರ ಸ್ವೀಕರಿಸಿದರು.

ಹಿಂದಿನ ಅಧ್ಯಕ್ಷರಾಗಿದ್ದ ಶಾಂತ್ ತಮ್ಮಯ್ಯ ಅವರ ಅವಧಿ 2024ರ ನವೆಂಬರ್ನಲ್ಲಿ ಅಂತ್ಯಗೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.