ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಿಲ್ಲವೆಂಬ ಅಸಮಾಧಾನದಿಂದ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಿಂದ ದೂರ ಉಳಿದಿದ್ದ ವಿಧಾನ ಪರಿಷತ್ ಸದಸ್ಯರೂ ಆಗಿರುವ ನಸೀರ್ ಅಹಮದ್ ಅವರನ್ನು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾ ಮಾಡಲಾಗಿದೆ.

‘ನಸೀರ್ ಅಹಮದ್ ಅವರನ್ನು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಯಾಗಿ ನೇಮಿಸಿರುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ’ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ತನ್ನ ಆದೇಶದಲ್ಲಿ ಹೇಳಿದೆ. ನಸೀರ್ ಅವರನ್ನು 2023ರ ಜೂನ್ 1ರಂದು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಯಾಗಿ ನೇಮಿಸಲಾಗಿತ್ತು.

ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರೂ ಆಗಿದ್ದ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಕೂಡಾ ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದರು. ಸಚಿವ ಜಮೀರ್ ಅಹಮದ್ ಖಾನ್ ಅವರೂ ಸಕ್ರಿಯವಾಗಿ ತೊಡಗಿಸಿಕೊಂಡಿರಲಿಲ್ಲ. ನಂತರ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಜಬ್ಬಾರ್ ರಾಜೀನಾಮೆ ನೀಡಿದ್ದರು. ನಸೀರ್ ಅವರೂ ರಾಜೀನಾಮೆ ನೀಡಬೇಕೆಂದು ಹೈಕಮಾಂಡ್ ತಾಕೀತು ಮಾಡಿತ್ತು.

ಈ ಬಗ್ಗೆ ಭಾನುವಾರ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ನಸೀರ್ ರಾಜೀನಾಮೆ ನೀಡಬಹುದೆಂದು ಅಂದುಕೊಂಡಿದ್ದೇನೆ’ ಎಂದಿದ್ದರು.

ನಸೀರ್ ಅಹಮದ್ಗೆ ರಾಜೀನಾಮೆ ನೀಡುವಂತೆ 2–3 ದಿನಗಳ ಹಿಂದೆಯೇ ಹೈಕಮಾಂಡ್ ನಾಯಕರು ಹಾಗೂ ಸಿದ್ದರಾಮಯ್ಯ ಸೂಚಿಸಿದ್ದರು. ಆದರೆ, ಅವರು ರಾಜೀನಾಮೆ ನೀಡಿರಲಿಲ್ಲ.

ಈ ಮಧ್ಯೆ, ಕಾಂಗ್ರೆಸ್ನ ಅಲ್ಪಸಂಖ್ಯಾತ ನಾಯಕರಾದ ಸಲೀಂ ಅಹಮದ್ ಮತ್ತು ರಿಜ್ವಾನ್ ಅರ್ಷದ್, ‘ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಕೆಲವು ನಾಯಕರ ಗುಂಪು ಸಂಚು ರೂಪಿಸಿತ್ತು’ ಎಂದು ಆರೋಪಿಸಿದ್ದರು. ಈ ಬಗ್ಗೆ ಪಕ್ಷದ ವರಿಷ್ಠರಿಗೆ ಚುನಾವಣಾ ಉಸ್ತುವಾರಿ ವರದಿ ನೀಡಿದ್ದರು.

ಮುಂದಿನ ಗುರಿ ಜಮೀರ್?: ಪ್ರಚಾರದಲ್ಲಿ ಭಾಗಿಯಾಗದೆ ಅಸಹಕಾರ ತೋರಿಸಿರುವ ಜಮೀರ್ ಅಹಮದ್ ಖಾನ್ ವಿರುದ್ಧವೂ ಹೈಕಮಾಂಡ್ಗೆ ವರದಿ ಸಲ್ಲಿಸಲಾಗಿದ್ದು, ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತದೆಯೇ ಎಂಬ ಪ್ರಶ್ನೆ ಮೂಡಿದೆ. ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆದಿದೆ ಎಂಬ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್, ಇದಕ್ಕೆ ಕಾರಣರಾದವರನ್ನು ಪಟ್ಟಿ ಮಾಡುತ್ತಿದೆ ಎಂದೂ ಗೊತ್ತಾಗಿದೆ.

ನಾನು ‘ಸುಪ್ರೀಂ’ ನಾಯಕ ಅಲ್ಲ: ಜಮೀರ್

‘ನಾನು ಮುಸ್ಲಿಂ ಸಮುದಾಯದ ಸುಪ್ರೀಂ ನಾಯಕ ಅಲ್ಲ. ದಾವಣಗೆರೆಯಲ್ಲಿ ಮುಸ್ಲಿಮರಿಗೆ ಟಿಕೆಟ್ ಕೇಳಿದ್ದರಲ್ಲಿ ಮುಚ್ಚುಮರೆ ಏನೂ ಇಲ್ಲ’ ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.

ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ನಾನು ನಾಯಕ ಆಗಲು ಹೊರಟಿಲ್ಲ. ಮುಂದೆಯೂ ನಾಯಕ ಆಗಲು ಹೋಗುವುದಿಲ್ಲ. ನಾನೊಬ್ಬ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ. ಸೇವಕ, ಸೇವೆ ಮಾಡುತ್ತಿದ್ದೇನೆ ಅಷ್ಟೇ’ ಎಂದರು.

‘ಶಿಗ್ಗಾವಿಯಲ್ಲಿ ಕೇಳಿ ಟಿಕೆಟ್ ತೆಗೆದುಕೊಂಡಿದ್ದೆವು. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲೂ ಸಮುದಾಯದ ಯಾರಿಗಾದರೂ ಟಿಕೆಟ್ ಕೊಡಿ, ನಾವು ಗೆಲ್ಲಿಸಿಕೊಂಡು ಬರುತ್ತೇವೆಂದು ಕೆಪಿಸಿಸಿ ಸಭೆಯಲ್ಲಿಯೇ ಎಲ್ಲರೆದುರು ಹೇಳಿದ್ದೇನೆ’ ಎಂದು ಹೇಳಿದರು.

‘ಜಬ್ಬಾರ್ ಅವರು ಮೊದಲು ಟಿಕೆಟ್ ಕೇಳಿದ್ದು ನಿಜ. ಆದರೆ, ತೀರ್ಮಾನ ಮಾಡಬೇಕಾಗಿರುವುದು ಹೈಕಮಾಂಡ್. ಜಬ್ಬಾರ್ಗೆ ಕೊಡಲು ಆಗುವುದಿಲ್ಲವೆಂದು ಹೈಕಮಾಂಡ್ ಚಿಂತನೆ ಮಾಡುತ್ತಿದೆ ಅಂದಾಗ ಯಾರಿಗಾದರೂ ಕೊಡಿ ಅಂದಿದ್ದೆ. ಗೆಲ್ಲಿಸಿಕೊಂಡು ಬರಲಿಲ್ಲವೆಂದರೆ ರಾಜೀನಾಮೆ ಕೊಡುತ್ತೇನೆ ಎಂದೂ ಹೇಳಿದ್ದೆ’ ಎಂದರು.

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಕುರಿತು ಪ್ರತಿಕ್ರಿಯಿಸಿದ ಜಮೀರ್, ‘ನಮ್ಮ ಪಕ್ಕದ ಮನೆಗೆ ಬಂದಿದ್ದ ಸಚಿವ ಮಲ್ಲಿಕಾರ್ಜುನ್ ನಮ್ಮ ಮನೆಗೆ ಬಂದಿಲ್ಲವೆಂದು ಜಬ್ಬಾರ್ ಹೇಳಿದರು. ನಾನು ಸ್ಥಳೀಯ ನಾಯಕ, ಅವರ ಜೊತೆಯಲ್ಲೇ ಇದ್ದವನು. ನಮ್ಮ ಮನೆಗೆ ಕನಿಷ್ಠ ಬರಬೇಕಿತ್ತಲ್ಲವೇ ಎಂದೂ ಜಬ್ಬಾರ್ ಬೇಜಾರಾಗಿದ್ದರು. ಅಲ್ಲದೆ, ಅವರ ಆರೋಗ್ಯ ಕೂಡ ಚೆನ್ನಾಗಿರಲಿಲ್ಲವೆಂದು ಮಾಧ್ಯಮಕ್ಕೂ ಹೇಳಿದ್ದಾರೆ. ನಾನು ಕೂಡ ಜಬ್ಬಾರ್ ಜೊತೆ ಮಾತನಾಡಿ, ಪ್ರಚಾರದಲ್ಲಿ ತೊಡಗಿಸಿಕೊಳ್ಳುವಂತೆ ಹೇಳಿದ್ದೆ’ ಎಂದು ತಿಳಿಸಿದರು.

‘ನಸೀರ್ ಅಹಮದ್ ಅವರಿಗೆ ಬಾಗಲಕೋಟೆ ಕ್ಷೇತ್ರದ ಜವಾಬ್ದಾರಿ ಕೊಟ್ಟಿದ್ದರು. ದಾವಣಗೆರೆಗೆ ಬಂದು ಹೋಗುತ್ತೇನೆಂದು ಮುಖ್ಯಮಂತ್ರಿಗೆ ನಸೀರ್ ಹೇಳಿದ್ದರು. ಅಲ್ಪಸಂಖ್ಯಾತರೆಲ್ಲರೂ ಒಗ್ಗಟ್ಟಾಗಿ ಇದ್ದೇವೆ. ಯಾರು ಷಡ್ಯಂತ್ರ ಮಾಡಿದ್ದಾರೆ, ಯಾರು ಬೆನ್ನಿಗೆ ಚೂರಿ ಹಾಕಿದ್ದಾರೆಂದು ಹೆಸರು ಹೇಳಲಿ. ಹೈಕಮಾಂಡ್ನಿಂದ ಸ್ಟಾರ್ ಪ್ರಚಾರಕನಾಗಿ ನನ್ನನ್ನು ಕೇರಳಕ್ಕೆ ಕಳುಹಿಸಿದ್ದರು. ಆದರೂ ಮುಖ್ಯಮಂತ್ರಿ ಕರೆದಿದ್ದಕ್ಕೆ ನಾನು ಒಂದು ದಿನ ದಾವಣಗೆರೆಗೆ ಬಂದಿದ್ದೇನೆ. ಮಲ್ಲಿಕಾರ್ಜುನ್ ಮನೆಯಲ್ಲಿ ಊಟ ಮಾಡಿದ್ದೇನೆ. ಸುದ್ದಿಗೋಷ್ಠಿ ಮಾಡಿದ್ದೇನೆ. ಟಿಕೆಟ್ ಕೇಳಿದರೂ ಕೊಟ್ಟಿಲ್ಲ ಎಂಬ ಅಸಮಾಧಾನ ಸ್ಥಳೀಯ ಮುಸ್ಲಿಮರಲ್ಲಿ ಇದ್ದಿದ್ದು ನಿಜ. ಅದು ಸರಿ ಹೋಗಿ, ಪಕ್ಷದ ಅಭ್ಯರ್ಥಿಯಾಗಿ ಸಮರ್ಥ್ ಅವರಿಗೆ ಅವಕಾಶ ಕೊಟ್ಟರು. ಅಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಚಿವ ಸ್ಥಾನಕ್ಕಾಗಿ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿದ ಜಮೀರ್, ‘ಎಲ್ಲರಿಗೂ ಸಚಿವರಾಗುವ ಆಸೆ ಇರುವುದು ಸಹಜ. ಎಲ್ಲರೂ ಪ್ರಯತ್ನ ಮಾಡುತ್ತಾರೆ. ನನಗೂ ಸಚಿವ ಆಗಬೇಕೆಂದು ಆಸೆ ಇತ್ತು. ಆಗಿದ್ದೇನೆ’ ಎಂದರು.

‘ಜಮೀರ್ ವಿರುದ್ಧ ಷಡ್ಯಂತ್ರ ನಡೆಯುತ್ತಿದೆಯೇ’ ಎಂಬ ಪ್ರಶ್ನೆಗೆ, ‘ರಾಜಕೀಯದಲ್ಲಿ ಇದೆಲ್ಲ ಸಹಜ. ಅವರವರ ಪ್ರಯತ್ನ ಅವರು ಮಾಡುತ್ತಾರೆ. ಅವರು ಸಚಿವರಾದರೆ ನನಗೂ ಸಂತೋಷ’ ಎಂದು ಯಾರ ಹೆಸರೂ ಹೇಳದೆ ಜಮೀರ್ ಪ್ರತಿಕ್ರಿಯಿಸಿದರು.

ಸಿ.ಎಂ ತೀರ್ಮಾನ– ಡಿಕೆಶಿ

‘ತಮ್ಮದೇ ಮೂಲಗಳಿಂದ ಮಾಹಿತಿ ಪಡೆದಿರುವ ಮುಖ್ಯಮಂತ್ರಿಯವರು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ತೆರಳಿ ಬಂಡಾಯ ಅಭ್ಯರ್ಥಿ ಹಿಂದೆ ಸರಿಯುವಂತೆ ಮಾಡಲು ಪಕ್ಷವು ನಸೀರ್ ಅವರಿಗೆ ಸೂಚಿಸಿತ್ತು. ಆದರೆ, ಅವರು ಆ ಜವಾಬ್ದಾರಿ ನಿಭಾಯಿಸಲು ವಿಫಲರಾಗಿದ್ದಾರೆ. ಅಲ್ಲಿ ಏನಾಗಿದೆ ಎಂದು ನನಗೆ ವರದಿ ಬರಬೇಕಿದೆ’ ಎಂದರು.

‘ಪಕ್ಷ ವಿರೋಧಿ ಚಟುವಟಿಕೆ ಮಾಡುವವರಿಗೆ ಇದು ಸಂದೇಶವೇ’ ಎಂಬ ಪ್ರಶ್ನೆಗೆ, ‘ಯಾವುದೇ ಪಕ್ಷವಾದರೂ ಶಿಸ್ತು ಬಹಳ ಮುಖ್ಯ. ಎಲ್ಲರನ್ನು ವಿಶ್ವಾಸಕ್ಕೆ ಪಡೆದುಕೊಂಡೇ ಅಭ್ಯರ್ಥಿ ಆಯ್ಕೆ ಮಾಡಿದ್ದೆವು. ನಂತರ ನಾವು ಎಲ್ಲ ನಾಯಕರೊಂದಿಗೆ ನಿತ್ಯ ಸಂಪರ್ಕದಲ್ಲಿದ್ದೆವು. ನಮ್ಮ ನಾಯಕರ ವರದಿಯ ಆಧಾರದಲ್ಲಿ ಮುಖ್ಯಮಂತ್ರಿ ತೀರ್ಮಾನ ತೆಗೆದುಕೊಂಡಿದ್ದಾರೆ’ ಎಂದರು.

‘ಸಚಿವ ಜಮೀರ್ ವಿರುದ್ಧವೂ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದೇ’ ಎಂಬ ಪ್ರಶ್ನೆಗೆ, ‘ಆ ಬಗ್ಗೆ ನನಗೆ ಮಾಹಿತಿ ಇಲ್ಲ’ ಎಂದರು.

ಗೋವಿಂದರಾಜ್ ಬಳಿಕ ನಸೀರ್ಗೆ ಕೊಕ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ವಜಾಗೊಳ್ಳುವುದರೊಂದಿಗೆ, ಈ ಸ್ಥಾನದಲ್ಲಿದ್ದ ಇಬ್ಬರೂ ಪದಚ್ಯುತರಾದಂತಾಗಿದೆ.

ಆರ್ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದಲ್ಲಿ 11 ಅಮಾಯಕರ ಪ್ರಾಣ ಹೋಗಿತ್ತು. ವಿಜಯೋತ್ಸವ ಆಚರಿಸಲು ಅಂದು ರಾಜಕೀಯ ಕಾರ್ಯದರ್ಶಿಯಾಗಿದ್ದ, ವಿಧಾನಪರಿಷತ್ ಸದಸ್ಯ ಕೆ. ಗೋವಿಂದರಾಜ್ ಕಾರಣ ಎಂಬ ಆರೋಪಗಳು ಎದುರಾಗಿದ್ದವು. ಈ ದುರ್ಘಟನೆಯ ಬಳಿಕ ಗೋವಿಂದರಾಜ್ ಅವರನ್ನು ಸ್ಥಾನದಿಂದ ವಜಾಗೊಳಿಸಲಾಗಿತ್ತು.

ನಸೀರ್ ವಜಾ ಬಳಿಕ ಇಬ್ಬರು ರಾಜಕೀಯ ಕಾರ್ಯದರ್ಶಿಗಳ ಸ್ಥಾನವೂ ಖಾಲಿಯಾದಂತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.