ನವದೆಹಲಿ: ಹುಣಸೆ, ಹಲಸು ಮತ್ತು ನೇರಳೆ ಮುಂತಾದ ಪೌಷ್ಟಿಕಾಂಶಯುಕ್ತ ಹಣ್ಣಿನ ಬೆಳೆಗಳಿಗಾಗಿ ಪ್ರತ್ಯೇಕವಾದ ರಾಷ್ಟ್ರೀಯ ಮಂಡಳಿ ಸ್ಥಾಪಿಸಬೇಕು ಎಂದು ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡರು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಲ್ಲಿ ಮನವಿ ಮಾಡಿದ್ದಾರೆ.

ಸಂಸತ್ ಭವನದಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಕೃಷಿ ಸಚಿವರನ್ನು ಶುಕ್ರವಾರ ಭೇಟಿಯಾದ ಮಾಜಿ ಪ್ರಧಾನಿ ತಮ್ಮ ಪ್ರಸ್ತಾವ ಕುರಿತ ಪತ್ರ ನೀಡಿದರು.

ಹುಣಸೆ ಹಣ್ಣನ್ನು ದೇಶದಾದ್ಯಂತ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಮಧ್ಯ, ಪೂರ್ವ ಮತ್ತು ದಕ್ಷಿಣ ಭಾರತದಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ಆದರೆ ಹಲಸು ಮತ್ತು ನೇರಳೆಗಳನ್ನು ಪ್ರಧಾನವಾಗಿ ಭಾರತದ ದಕ್ಷಿಣ, ಮಧ್ಯ, ಪೂರ್ವ ಮತ್ತು ಪೂರ್ವ ರಾಜ್ಯಗಳಲ್ಲಿ ಬೆಳೆಯಲಾಗುತ್ತದೆ. ಭಾರತವು ಈ ಹಣ್ಣುಗಳ ಅತಿದೊಡ್ಡ ಉತ್ಪಾದಕ ರಾಷ್ಟ್ರವಾಗಿದೆ. ಏಷ್ಯಾದ ಕೆಲ ದೇಶಗಳು ಮತ್ತು ಆಫ್ರಿಕಾದ ದೇಶಗಳಲ್ಲಿ ಸಣ್ಣ ಪ್ರಮಾಣದಲ್ಲಿ ಈ ಕೃಷಿ ಕಂಡುಬರುತ್ತದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಹಣ್ಣುಗಳು ಮತ್ತು ಅವುಗಳ ಉಪ ಉತ್ಪನ್ನಗಳು ಔಷಧೀಯ ಕೈಗಾರಿಕೆಗಳಿಂದ ಬೇಡಿಕೆ ಸೇರಿದಂತೆ ದೇಶೀಯ ಮತ್ತು ರಫ್ತು ಮಾರುಕಟ್ಟೆಗಳಲ್ಲಿ ಹೆಚ್ಚಿನ ಬೇಡಿಕೆಯನ್ನು ಹೊಂದಿವೆ. ಈ ಬೆಳೆಗಳು ಹೆಚ್ಚಿನ ಆದಾಯ ಗಳಿಸುವ, ‘ಡಾಲರ್ ಗಳಿಸುವ’ ಬೆಳೆಗಳಾಗಿವೆ. ಅಲ್ಲದೆ, ಇದು ರಾಷ್ಟ್ರೀಯ ಆರ್ಥಿಕತೆಗೆ ಕೊಡುಗೆ ನೀಡುತ್ತದೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ದೊಡ್ಡ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.