ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀಟ್‌ ಪಿ.ಜಿ: ಕೇಂದ್ರಕ್ಕೆ ನೋಟಿಸ್

Published 11 ಅಕ್ಟೋಬರ್ 2023, 16:24 IST
Last Updated 11 ಅಕ್ಟೋಬರ್ 2023, 16:24 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (ನೀಟ್) ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಪಿ.ಜಿ. ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಅರ್ಹತಾ ಅಂಕವನ್ನು ಶೂನ್ಯಕ್ಕೆ ಇಳಿಸಿ ಹೊರಡಿಸಿರುವ ಅಧಿಸೂಚನೆ ಹಿಂಪಡೆಯಲು ನಿರ್ದೇಶಿಸಬೇಕು‘ ಎಂದು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಸಂಬಂಧ ಹುಬ್ಬಳ್ಳಿಯ ಡಾ. ವಿನೋದ್ ಜಿ. ಕುಲಕರ್ಣಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಮೆಡಿಕಲ್ ಕೌನ್ಸೆಲಿಂಗ್ ಕಮಿಟಿ (ಎಂಸಿಸಿ) ಸೇರಿದಂತೆ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.

ಅರ್ಜಿಯಲ್ಲಿ ಏನಿದೆ?: ‘ಕಳೆದ ಹತ್ತು ವರ್ಷಗಳಿಂದ ನೀಟ್-ಪಿಜಿ ಕಟ್ ಆಫ್ ಅಂಕ ಶೇ 50ರಷ್ಟಿತ್ತು. ಆದರೆ, 2023ನೇ ಸಾಲಿನ ನೀಟ್-ಪಿಜಿ ಕೌನ್ಸೆಲಿಂಗ್‌ಗೆ ಹಾಜರಾಗಲು ಕಟ್ ಆಫ್ ಅಂಕಗಳನ್ನು ಶೂನ್ಯಕ್ಕೆ ಇಳಿಸಿ ಎಂಸಿಸಿ 2023ರ ಸೆಪ್ಟೆಂಬರ್ 20ರಂದು ಅಧಿಸೂಚನೆ ಹೊರಡಿಸಿದೆ. ಇದರಿಂದ ಖಾಸಗಿ ಮೆಡಿಕಲ್ ಕಾಲೇಜುಗಳ ಲಾಬಿ ಇನ್ನಷ್ಟು ಹೆಚ್ಚಲು ಅವಕಾಶ ಮಾಡಿಕೊಟ್ಟಂತಾಗುತ್ತದೆ‘ ಎಂದು ಅರ್ಜಿಯಲ್ಲಿ ದೂರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT