ಕಾಂಗ್ರೆಸ್ ನಾಯಕರ ವಿರುದ್ಧ ದಾಖಲಾಗಿದ್ದ 'ನ್ಯಾಷನಲ್ ಹೆರಾಲ್ಡ್' ಪ್ರಕರಣವನ್ನು ನ್ಯಾಯಾಲಯ ವಜಾಗೊಳಿಸಿದ ಬೆನ್ನಲ್ಲೇ, ಬೆಳಗಾವಿಯ ಸುವರ್ಣ ವಿಧಾನಸೌಧ ಬಳಿಯ ಗಾಂಧಿ ಪ್ರತಿಮೆ ಎದುರು ರಾಜ್ಯ ಕಾಂಗ್ರೆಸ್ ನಾಯಕರು ಬುಧವಾರ ಪೂರ್ವನಿಯೋಜಿತ ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕೆಲವು ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಒಂದೂವರೆ ತಾಸು ಪ್ರತಿಭಟಿಸಿದರು. ಸದನ ಕಲಾಪಗಳಿಂದ ಹೊರಗುಳಿದು ಧರಣಿ ಕುಳಿತರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.