ನವದೆಹಲಿ: ‘ಬಟ್ಟೆ ಗಲೀಜಾಗಿವೆ’ ಎಂಬ ಕಾರಣಕ್ಕೆ ರೈತರೊಬ್ಬರನ್ನು ಬೆಂಗಳೂರಿನ ಮೆಟ್ರೊ ನಿಲ್ದಾಣದೊಳಗೆ ಬಿಡದೇ ಭದ್ರತಾ ಸಿಬ್ಬಂದಿ ಅಮಾನವೀಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗವು ಬುಧವಾರ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
.ಕೊಳೆ ಬಟ್ಟೆ ಧರಿಸಿ ಬಂದಿದ್ದ ವ್ಯಕ್ತಿಗೆ ನಮ್ಮ ಮೆಟ್ರೊ ಪ್ರಯಾಣಕ್ಕೆ ನಿರಾಕರಣೆ!.
ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಬೆಂಗಳೂರು ಮೆಟ್ರೊ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿರುವ ಆಯೋಗವು ನಾಲ್ಕು ವಾರಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದೆ. ಈ ಘಟನೆಗೆ ಸಂಬಂಧಿಸಿದ ಕೈಗೊಂಡ ಕ್ರಮಗಳ ಹಾಗೂ ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕೈಗೊಂಡ ಉಪಕ್ರಮಗಳ ವಿವರ ವರದಿಯಲ್ಲಿರಬೇಕು ಎಂದೂ ಆಯೋಗ ತಿಳಿಸಿದೆ.

ರಾಜಾಜಿನಗರ ಮೆಟ್ರೊ ನಿಲ್ದಾಣದಲ್ಲಿ ಫೆ.18ರಂದು ನಡೆದಿರುವ ಘಟನೆಯನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿರುವ ಕಾರ್ತಿಕ್ ಐರಾನಿ ಎಂಬುವವರು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ಲೋಡ್ ಮಾಡಿದ್ದರು.
.ನಮ್ಮ ಮೆಟ್ರೊ: 118 ಕಿ.ಮೀ ವಿಸ್ತರಣೆ, ಕಾರ್ಯಸಾಧ್ಯತಾ ವರದಿಗೆ ಟೆಂಡರ್.
ಮಾಧ್ಯಮ ವರದಿ ನಿಜವಾಗಿದ್ದರೆ, ಅದು ಮಾನವ ಹಕ್ಕುಗಳ ಉಲ್ಲಂಘನೆ. ಯಾವುದೇ ವ್ಯಕ್ತಿಯು ಧರಿಸಿರುವ ಬಟ್ಟೆಯ ಸ್ವರೂಪದ ಆಧಾರದ ಮೇಲೆ ಸಾರ್ವಜನಿಕ ಸಾರಿಗೆಗೆ ಪ್ರವೇಶ ನಿರಾಕರಿಸುವಂತಿಲ್ಲ. ಯಾರಾದರೂ ಯಾವುದೇ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದರೆ ಮಾತ್ರ ತಡೆಯಬಹುದು ಎಂದು ಆಯೋಗ ಸ್ಪಷ್ಟಪಡಿಸಿದೆ.
.ನಮ್ಮ ಮೆಟ್ರೊ: ನೇರಳೆ ಮಾರ್ಗದಲ್ಲಿ ಸೋಮವಾರದಿಂದ ಪ್ರತಿ 3 ನಿಮಿಷಕ್ಕೊಂದು ರೈಲು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.