ಚಿಂಕಾರ ವನ್ಯಜೀವಿ ಧಾಮವು 136.11 ಚ.ಕಿ.ಮೀ ವಿಸ್ತೀರ್ಣ ಹೊಂದಿದ್ದು, ಪರಿಸರ ಸೂಕ್ಷ್ಮ ವಲಯವು 157.0962 ಚ.ಕಿ.ಮೀ ವ್ಯಾಪಿಸಿದೆ. ಇದರಲ್ಲಿ 18.5662 ಚ.ಕಿ.ಮೀ ಡೀಮ್ಡ್ ಅರಣ್ಯ ಪ್ರದೇಶವಿದೆ. ಈ ಅರಣ್ಯ ಪ್ರದೇಶವು ವಿನಾಶದ ಅಂಚಿನಲ್ಲಿರುವ ಚಿಂಕಾರ (ಹುಲ್ಲೇಕರ) ಜತೆಗೆ ವಿವಿಧ ವನ್ಯಜೀವಿಗಳು, ವಿಶಿಷ್ಟ ಜಾತಿಯ ಸಸ್ಯ ಸಂಪತ್ತನ್ನು ಒಳಗೊಂಡಿದೆ. ತುಮಕೂರು ಜಿಲ್ಲೆಯ ಶಿರಾ, ಚಿಕ್ಕನಾಯಕನಹಳ್ಳಿ, ಗುಬ್ಬಿ ತಾಲ್ಲೂಕುಗಳು ಹಾಗೂ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವ್ಯಾಪ್ತಿಯಲ್ಲಿ ಬುಕ್ಕಾಪಟ್ಟಣ ವನ್ಯಜೀವಿ ಧಾಮ ವಿಸ್ತರಿಸಿಕೊಂಡಿದೆ.