ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವನ್ಯಜೀವಿ ಕಾಯ್ದೆ ಪುಸ್ತಕ: ಉಚಿತ ವಿತರಣೆ

Last Updated 9 ಅಕ್ಟೋಬರ್ 2018, 20:16 IST
ಅಕ್ಷರ ಗಾತ್ರ

ಬೆಂಗಳೂರು:ನೇಚರ್ ಕನ್ಸರ್ವೇಷನ್ ಫೌಂಡೇಷನ್ ವತಿಯಿಂದ ಮಂಗಳವಾರ ‘ವನ್ಯಜೀವಿ ಸಂರಕ್ಷಣಾ ಕಾಯಿದೆ– 1972’ ಪುಸ್ತಕದ ಕನ್ನಡ ಆವೃತ್ತಿಯನ್ನು ಹೊರ ತರಲಾಗಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿಗೆ ಅದರ ಪ್ರತಿಗಳನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆ, ವನ್ಯಜೀವಿ ಸಂರಕ್ಷಣಾ ಕರ್ನಾಟಕ ನಿಯಮ, ಅಧಿಸೂಚನೆ ಮತ್ತು ಇತರ ಮಾಹಿತಿಯನ್ನು ಈ ಪುಸ್ತಕ ಒಳಗೊಂಡಿದ್ದು, ಫೌಂಡೇಷನ್‌ನಸಂಜಯ್ ಗುಬ್ಬಿ ಮತ್ತು ಎಚ್.ಸಿ. ಪೂರ್ಣೇಶ ಕನ್ನಡಕ್ಕೆ ಅನುವಾದ ಮಾಡಿದ್ದಾರೆ.ನಗರದಲ್ಲಿ ನಡೆದ 64ನೇ ವನ್ಯಜೀವಿ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಈ ಪುಸ್ತಕವನ್ನು ಬಿಡುಗಡೆಗೊಳಿಸಿದರು.ಅರಣ್ಯ ಸಚಿವ ಆರ್.ಶಂಕರ್‌ ಹಾಜರಿದ್ದರು.

ಭಾರತೀಯ ಕಾಯ್ದೆಮತ್ತು ಅಧಿಸೂಚನೆಗಳು ಅಧಿಕೃತವಾಗಿ ಇಂಗ್ಲಿಷ್‌ ಮತ್ತು ಹಿಂದಿ ಭಾಷೆಯಲ್ಲಿ ಪ್ರಕಟಗೊಳ್ಳುತ್ತವೆ. ಈ ಭಾಷೆಯನ್ನು ಅರ್ಥೈಸಿಕೊಳ್ಳುವುದು ಕೆಲವೊಮ್ಮೆ ಕ್ಲಿಷ್ಟಕರವಾಗಬಹುದು. ಹಾಗಾಗಿ, ಇಲಾಖೆಗೆ ಅಗತ್ಯವಿರುವ ಮಾಹಿತಿಯನ್ನು ಕನ್ನಡದಲ್ಲಿ ನೀಡಲು ಈ ಕೃತಿಯನ್ನು ಹೊರತರಲಾಗಿದೆ ಎಂದು ಫೌಂಡೇಷನ್‌ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT