ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನವಕರ್ನಾಟಕ ಪ್ರಕಾಶನದ ರೂವಾರಿ ಆರ್.ಎಸ್. ರಾಜಾರಾಮ್ ಇನ್ನಿಲ್ಲ

Published : 17 ಆಗಸ್ಟ್ 2024, 5:07 IST
Last Updated : 17 ಆಗಸ್ಟ್ 2024, 5:07 IST
ಫಾಲೋ ಮಾಡಿ
Comments

ಬೆಂಗಳೂರು: ಪ್ರಗತಿಪರ ಚಿಂತಕ ಹಾಗೂ ನವಕರ್ನಾಟಕ ಪ್ರಕಾಶನದ ರೂವಾರಿಯಾದ ಆರ್.ಎಸ್. ರಾಜಾರಾಮ್ (84) ಅವರು ವಯೋಸಹಜ ಅನಾರೋಗ್ಯದಿಂದ ಶನಿವಾರ ಅಬ್ಬಿಗೆರೆಯ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೃತರಿಗೆ ಪುತ್ರ ಹರ್ಷ, ಪುತ್ರಿ ಪೂರ್ಣ, ಸೊಸೆ ಪ್ರಿಯಾ ಹಾಗೂ ಅಳಿಯ ರಾಘವೇಂದ್ರ ಇದ್ದಾರೆ. ಅವರ ನಿವಾಸದಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಭಾನುವಾರ ಬೆಳಿಗ್ಗೆ 11.30ಕ್ಕೆ ಹೆಬ್ಬಾಳದ ಚಿತಾಗಾರದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

1941ರಲ್ಲಿ ಮಂಗಳೂರಿನಲ್ಲಿ ಜನಿಸಿದ್ದ ರಾಜಾರಾಮ್‌ ಅವರು, ಮಂಗಳೂರು ಮತ್ತು ಪುತ್ತೂರಿನಲ್ಲಿ ವಿದ್ಯಾಭ್ಯಾಸ ಮಾಡಿದ್ದರು. ಸ್ವಾತಂತ್ರ್ಯ ಹೋರಾಟಗಾರ, ಕಮ್ಯುನಿಸ್ಟ್ ಪಕ್ಷದ ನಾಯಕರಾಗಿದ್ದ ಬಿ.ವಿ.ಕಕ್ಕಿಲ್ಲಾಯ ಅವರ ಸೂಚನೆಯ ಮೇರೆಗೆ 1960ರಲ್ಲಿ ಬೆಂಗಳೂರಿನ ನವಕರ್ನಾಟಕ ಪ್ರಕಾಶನ ಸಂಸ್ಥೆಯಲ್ಲಿ ಎಸ್.ಆರ್. ಭಟ್ ಅವರಿಗೆ ಸಹಾಯಕರಾಗಿ ಸೇರಿದ್ದರು. ತಮ್ಮ ಕ್ರಿಯಾಶೀಲತೆಯಿಂದ ನವಕರ್ನಾಟಕ ಪ್ರಕಾಶನದ ವಿವಿಧ ಹುದ್ದೆಗಳಿಗೆ ಏರಿ, ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.

ಐದು ದಶಕಗಳಿಗೂ ಹೆಚ್ಚು ಕಾಲ ನವಕರ್ನಾಟಕ ಪ್ರಕಾಶನ ಸಂಸ್ಥೆಯನ್ನು ಮುನ್ನಡೆಸಿದ ರಾಜಾರಾಮ್‌, ಕನ್ನಡ ಸಾಹಿತ್ಯ ಲೋಕಕ್ಕೆ ಜನಪರ, ವೈಚಾರಿಕ, ವೈಜ್ಞಾನಿಕ ಮಾರ್ಗವನ್ನು ನಿರ್ಮಿಸಿಕೊಟ್ಟ ಪ್ರಮುಖರಲ್ಲಿ ಒಬ್ಬರು. 2017ರಲ್ಲಿ ಸಂಸ್ಥೆಯ ನಿರ್ದೇಶಕ ಹುದ್ದೆಯಿಂದ ನಿರ್ಗಮಿಸಿದ್ದರು. ಈ ಸಂದರ್ಭದಲ್ಲಿ ಅವರ ಕುರಿತು ‘ನವಕರ್ನಾಟಕ ಪ್ರಕಾಶನದ ರೂವಾರಿ ಆರ್.ಎಸ್. ರಾಜಾರಾಮ್’ ಮತ್ತು ಪರಂಜ್ಯೋತಿ ಸ್ವಾಮಿ ಅವರು ಬರೆದ ‘ಸೃಷ್ಟಿಯ ಸೆಲೆ ಆರ್.ಎಸ್. ರಾಜಾರಾಮ್ ಬದುಕು–ಸಾಧನೆ’ ಎಂಬ ಪುಸ್ತಕಗಳು ಪ್ರಕಟಗೊಂಡಿದ್ದವು. ಅವರಿಗೆ 2018ರಲ್ಲಿ ‘ರಾಜ್ಯೋತ್ಸವ ಪ್ರಶಸ್ತಿ’ ಸಂದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT