‘ನೀಟ್ ವಿದ್ಯಾರ್ಥಿಗಳಿಗೆ ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಣೆ ನಂತರ ‘ಚಾಯ್ಸ್’ ಆಯ್ಕೆಗೆ ಅವಕಾಶ ಇರುವುದಿಲ್ಲ. ಈ ಹಂತದಲ್ಲಿ ಹಂಚಿಕೆಯಾದ ಕಾಲೇಜುಗಳಿಗೆ ಪ್ರವೇಶ ಪಡೆಯುವುದು ಕಡ್ಡಾಯ. ಶುಲ್ಕ ಪಾವತಿಸಿ, ಕಾಲೇಜಿಗೆ ಪ್ರವೇಶ ಪಡೆಯದವರು ಕಾನೂನು ಕ್ರಮ ಎದುರಿಸಬೇಕಾಗುತ್ತದೆ’ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.