ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನೀಟ್, ಸಿಇಟಿ: ಇಂದಿನಿಂದ ಪ್ರವೇಶ ಪ್ರಕ್ರಿಯೆ

Published : 31 ಆಗಸ್ಟ್ 2024, 0:30 IST
Last Updated : 31 ಆಗಸ್ಟ್ 2024, 0:30 IST
ಫಾಲೋ ಮಾಡಿ
Comments

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೀಟ್‌ ಹಾಗೂ ಸಿಇಟಿ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಿದ್ದು, ಆ. 31ರಿಂದಲೇ ಪ್ರವೇಶ ಪ್ರಕ್ರಿಯೆಗಳು ಆರಂಭವಾಗಲಿವೆ.

ವೈದ್ಯಕೀಯ, ದಂತವೈದ್ಯಕೀಯ, ಆಯುಷ್, ಎಂಜಿನಿಯರಿಂಗ್, ವಾಸ್ತುಶಿಲ್ಪಶಾಸ್ತ್ರ, ಕೃಷಿ ವಿಜ್ಞಾನ, ಪಶುವೈದ್ಯಕೀಯ, ಬಿ-ಫಾರ್ಮ, ಬಿಎಸ್‌ಸಿ (ನರ್ಸಿಂಗ್), ಯೋಗ ಮತ್ತು ನ್ಯಾಚುರೋಪತಿ ಮುಂತಾದ ಕೋರ್ಸಗಳ ಅಭ್ಯರ್ಥಿಗಳು ಪೋಷಕರ ಜತೆ ಚರ್ಚಿಸಿ, ವಿವರಣೆಗಳನ್ನು ಅರ್ಥಮಾಡಿಕೊಂಡು ನಾಲ್ಕು ಚಾಯ್ಸ್‌ಗಳಲ್ಲಿ ಸೂಕ್ತವಾದ ಕಾಲೇಜು ಹಾಗೂ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಂಡು ಪ್ರವೇಶ ಪಡೆಯಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌. ಪ್ರಸನ್ನ ಹೇಳಿದ್ದಾರೆ.

‘ಚಾಯ್ಸ್ 1 ಮತ್ತು ಚಾಯ್ಸ್ 2’ ರ ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ಆ.31ರ ಮಧ್ಯಾಹ್ನ 1ರಿಂದ ಸೆ.4ರ ಸಂಜೆ 4ರ ಒಳಗೆ ಶುಲ್ಕ ಪಾವತಿಸಬೇಕು. ಶುಲ್ಕ ಪಾವತಿಸಿದ ನೀಟ್‌ ಅಭ್ಯರ್ಥಿಗಳು ಮೂಲ ದಾಖಲೆಗಳು ಮತ್ತು ಎರಡು ಸೆಟ್‌ ದೃಢೀಕೃತ ನಕಲು ಪ್ರತಿಗಳೊಂದಿಗೆ  ಸೆ. 2ರ ಬೆಳಿಗ್ಗೆ 10:30ರಿಂದ ಸೆ. 4ರ ಸಂಜೆ 4 ರವರೆಗೆ ಕೆಇಎ ಕಚೇರಿಗೆ ಖುದ್ದಾಗಿ ಸಲ್ಲಿಸಬೇಕು. ಸೆ. 2ರಿಂದ ಸೆ. 5ರೊಳಗೆ ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳಬೇಕು. ಆಯ್ಕೆ ಮಾಡಿಕೊಂಡ ಕಾಲೇಜುಗಳಿಗೆ ಸೆ. 5ರ ಸಂಜೆ 5:30ಕ್ಕೆ ಮುಂಚೆ ಪ್ರವೇಶ ಪಡೆಯಬೇಕು ಎಂದು ಮಾಹಿತಿ ನೀಡಿದ್ದಾರೆ.

ಕಾಲಮಿತಿಯ ಒಳಗೆ ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಲು ಶನಿವಾರ, ಭಾನುವಾರ ಹಾಗೂ ಗೆಜೆಟ್ ಪ್ರಕಟಿತ ರಜಾ ದಿನಗಳನ್ನೂ ಕೆಲಸದ ದಿನಗಳೆಂದು ಪರಿಗಣಿಸಲಾಗುವುದು. ಎಂಜಿನಿಯರಿಂಗ್ ಪ್ರವೇಶ ಪಡೆಯುವ ಅಭ್ಯರ್ಥಿಗಳು ಮೂಲ ದಾಖಲೆಗಳ ಸಮೇತ ಕಾಲೇಜುಗಳಿಗೆ ಹೋಗಿ ವರದಿ ಮಾಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT