ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ಗಳ ಎರಡನೇ ಮುಂದುವರಿದ ಸುತ್ತು ಹಾಗೂ ಎಂಜಿನಿಯರಿಂಗ್ ಸೇರಿದಂತೆ ಇತರೆ ವೃತ್ತಿ ಶಿಕ್ಷಣ ಕೋರ್ಸ್ಗಳ ಮೂರನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭವಾಗಿದೆ. ಖಾತ್ರಿ ಠೇವಣಿ ಪಾವತಿಸಿ, ಆಯ್ಕೆಗಳನ್ನು ಬದಲು ಮಾಡಿಕೊಳ್ಳಲು ಹಾಗೂ ಹೊಸದಾಗಿ ಸೇರಿಸಲು ಸೆ.8ರವರೆಗೆ ಅವಕಾಶ ನೀಡಲಾಗಿದೆ.

ಸೀಟು ಲಭ್ಯತಾ ಪಟ್ಟಿಗೆ ಹೊಸದಾಗಿ ಬೆಳಗಾವಿಯ ಜೆಎನ್ಎಂಸಿ ಕಾಲೇಜಿನ 12 ವೈದ್ಯಕೀಯ ಸೀಟು ಹಾಗೂ ಮೈಸೂರಿನ ಫರೂಕಿ ದಂತ ವೈದ್ಯಕೀಯ ಕಾಲೇಜಿನ 40 ಸೀಟು ಹಾಗೂ ಬಿಜಿಎಸ್ ಗ್ಲೋಬಲ್ ದಂತ ವೈದ್ಯಕೀಯ ಕಾಲೇಜಿನ 50 ಸೀಟುಗಳು ಸೇರ್ಪಡೆಯಾಗಿವೆ. ಆಸಕ್ತರು ಬದಲಾವಣೆ ವೇಳೆ ಈ ಸೀಟುಗಳನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹೇಳಿದ್ದಾರೆ.

ಎಂಟು ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಹೆಚ್ಚುವರಿಯಾಗಿ ಸೇರ್ಪಡೆಯಾಗಿರುವ 400 ವೈದ್ಯಕೀಯ ಸೀಟುಗಳನ್ನು ಈ ಸುತ್ತಿಗೆ ಪರಿಗಣಿಸಲಾಗುತ್ತದೆ. ಅಲ್ಲದೆ, ಈ ಸರ್ಕಾರಿ ಕಾಲೇಜುಗಳಲ್ಲಿ ತಲಾ ಒಂದು ಸೀಟಿಗೆ ₹25 ಲಕ್ಷದಂತೆ ಎನ್ಆರ್ಐ ಸೀಟುಗಳನ್ನು ಸರ್ಕಾರ ಕೊಟ್ಟಿದ್ದು, ಅರ್ಹ ಎನ್ಆರ್ಐ ಅಭ್ಯರ್ಥಿಗಳು ಹೊಸದಾಗಿ ಸದರಿ ಕಾಲೇಜುಗಳ ಸೀಟುಗಳಿಗೆ ಆಯ್ಕೆಗಳನ್ನು ನಮೂದಿಸಬಹುದು. ಎನ್ಆರ್ಐ ಅಲ್ಲದ ಅಭ್ಯರ್ಥಿಗಳು ಕೂಡ ಈ ಕಾಲೇಜುಗಳಲ್ಲಿ ‘ಕ್ಯೂ’ ಸೀಟುಗಳಿಗೆ ಆಯ್ಕೆಗಳನ್ನು ದಾಖಲಿಸಬಹುದು. ಭರ್ತಿಯಾಗದೆ ಉಳಿಯುವ ಎನ್ಆರ್ಐ ಸೀಟುಗಳನ್ನು ‘ಕ್ಯೂ’ ಸೀಟುಗಳನ್ನಾಗಿ ಪರಿವರ್ತಿಸಿ, ಹಂಚಿಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಸಿಇಟಿ ಕೋರ್ಸ್ಗಳ ಪ್ರವೇಶಕ್ಕೆ ಮೂರನೇ ಸುತ್ತಿನಲ್ಲಿ ಭಾಗವಹಿಸುವ ಎಲ್ಲ ವರ್ಗದ ಅರ್ಹ ಅಭ್ಯರ್ಥಿಗಳು ₹10 ಸಾವಿರ ಖಾತ್ರಿ ಠೇವಣಿ ಪಾವತಿಸಬೇಕು. ಬಳಿಕ ಆಯ್ಕೆ, ಹೊಸದಾಗಿಯೂ ಕೋರ್ಸ್ಗಳನ್ನು ದಾಖಲಿಸಲು ಅವಕಾಶ ಇರುತ್ತದೆ. ಮೊದಲ ಮತ್ತು ಎರಡನೇ ಸುತ್ತಿನಲ್ಲಿ ಯಾವುದೇ ಸೀಟು ಹಂಚಿಕೆಯಾಗದವರು, 2ನೇ ಸುತ್ತಿನಲ್ಲಿ ಛಾಯ್ಸ್-1 ಅಥವಾ ಛಾಯ್ಸ್-2 ಆಯ್ಕೆ ಮಾಡಿ ಶುಲ್ಕ ಪಾವತಿ ಮಾಡದವರು, ಛಾಯ್ಸ್-3 ದಾಖಲಿಸಿ, ಖಾತ್ರಿ ಠೇವಣಿ ಪಾವತಿಸದೆ ಇರುವ ಅಭ್ಯರ್ಥಿಗಳಿಗೆ ಮೂರನೇ ಸುತ್ತಿನಲ್ಲಿ ಆಪ್ಷನ್ ದಾಖಲಿಸಲು ಅವಕಾಶ ನೀಡಲಾಗಿದೆ ಎಂದಿದ್ದಾರೆ.

ಸೀಟು ರದ್ದತಿಗೆ ಸೆ.8 ಕೊನೆ ದಿನ

ಸೀಟು ಹಂಚಿಕೆಯಾದ ಕಾಲೇಜುಗಳಿಗೆ ಪ್ರವೇಶ ಪಡೆದು ನಂತರ ಸೀಟು ಬೇಡ ಎನ್ನುವವರೂ ಸೆ.8ರ ಒಳಗೆ ಕೆಇಎಗೆ ಭೇಟಿ ನೀಡಿ ಸೀಟು ರದ್ದುಪಡಿಸಿಕೊಳ್ಳಬಹುದು.

ಮೂರನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದ ನಂತರ ಕಾಲೇಜಿಗೆ ಸೇರುವುದು ಕಡ್ಡಾಯವಾಗಿದ್ದು, ಅಭ್ಯರ್ಥಿಗಳು ಎಚ್ಚರವಹಿಸಿ, ಕೋರ್ಸ್, ಕಾಲೇಜುಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ಒಂದು ವೇಳೆ ಈ ಸುತ್ತಿನಲ್ಲಿ ಹಂಚಿಕೆಯಾದ ಕಾಲೇಜಿಗೆ ಪ್ರವೇಶ ಪಡೆಯದೇ ಇದ್ದಲ್ಲಿ ಪೂರ್ಣ ಶುಲ್ಕವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ. ಕಾನೂನು ಕ್ರಮ ಕೂಡ ಜರುಗಿಸಲಾಗುತ್ತದೆ ಎಂದು ಪ್ರಸನ್ನ ಹೇಳಿದ್ದಾರೆ.

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲೂ ಎನ್ಆರ್ಐ ಕೋಟಾ

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲೂ ಇನ್ನು ಮುಂದೆ ಅನಿವಾಸಿ ಭಾರತೀಯರಿಗೆ (ಎನ್ಆರ್ಐ) ಶೇ 15ರಷ್ಟು ಸೀಟುಗಳನ್ನು ಮೀಸಲಿಡಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, 2025-26ನೇ ಸಾಲಿನಿಂದಲೇ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ಆದೇಶ ಹೊರಡಿಸಿದೆ. 400 ಸರ್ಕಾರಿ ಕಾಲೇಜುಗಳಿಗೆ ಸಿಕ್ಕಿವೆ. ಈ ವರ್ಷ ಹೊಸ 400 ಸೀಟುಗಳಲ್ಲಿ ಎನ್ಆರ್ಐ ಕೋಟಾ ನಿಗದಿಪಡಿಸಲಾಗಿದೆ. ₹25 ಲಕ್ಷ ಶುಲ್ಕ ನಿಗದಿಮಾಡಲಾಗಿದೆ. ಇದರಿಂದ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಸರ್ಕಾರದ ಅನುದಾನದ ಮೇಲೆ ಹೆಚ್ಚು ಅವಲಂಬಿತವಾಗದೆ ಸ್ವಾವಲಂಬನೆ ಪಡೆಯಲು ನೆರವಾಗಲಿದೆ ಎಂದರು.

ಕರ್ನಾಟಕದಲ್ಲಿ ಪ್ರತಿ ವರ್ಷ ವೈದ್ಯಕೀಯ ಶಿಕ್ಷಣಕ್ಕೆ ದಾಖಲಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕೆಲವು ಪ್ರತಿಭಾವಂತ ವಿದ್ಯಾರ್ಥಿಗಳು ಖಾಸಗಿ ಕಾಲೇಜುಗಳಿಗೆ ಅಧಿಕ ಶುಲ್ಕ ಕಟ್ಟಿ ಪ್ರವೇಶ ಪಡೆಯಲು ಸಾಧ್ಯವಾಗುತ್ತಿಲ್ಲ. ಹೆಚ್ಚುವರಿಯಾಗಿ ವೈದ್ಯಕೀಯ ಸೀಟುಗಳಿಂದಾಗಿ ಪ್ರತಿಭಾವಂತರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ನ.4ರಿಂದ ಕೌಶಲ ಶೃಂಗಸಭೆ

ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯ ಮಾದರಿಯಲ್ಲಿ ಇದೇ ನವೆಂಬರ್ 4, 5 ಮತ್ತು 6ರಂದು ಕೌಶಲ ಶೃಂಗಸಭೆ ಆಯೋಜಿಸಲಾಗುತ್ತದೆ. ದಸರಾ ಬಳಿಕ ಮೈಸೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ ಎಂದು ಶರಣ ಪ್ರಕಾಶ ಪಾಟೀಲ ಹೇಳಿದರು.

‘ನೋಂದಣಿ ಕಾರ್ಯ ಶೀಘ್ರ ಆರಂಭವಾಗಲಿದೆ. ಪೋಸ್ಟರ್ ಬಿಡುಗಡೆ ಮಾಡಿದ್ದೇವೆ. ಅಕ್ಟೋಬರ್ನಲ್ಲಿ ನರ್ಸಿಂಗ್ ಶೃಂಗಸಭೆಯನ್ನೂ ಆಯೋಜಿಸುತ್ತಿದ್ದೇವೆ. ನಂತರ ವಿದೇಶದಲ್ಲಿ ರೋಡ್ ಶೋ ಮಾಡುವ ಮೂಲಕ ಉದ್ಯೋಗ ಮೇಳಕ್ಕೆ ಆದ್ಯತೆ ನೀಡುತ್ತೇವೆ’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.