ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವೈದ್ಯಕೀಯ ಸೀಟು ರದ್ದತಿಗೆ ಇಂದೇ ಕೊನೆ ದಿನ

Published : 19 ಸೆಪ್ಟೆಂಬರ್ 2024, 23:30 IST
Last Updated : 19 ಸೆಪ್ಟೆಂಬರ್ 2024, 23:30 IST
ಫಾಲೋ ಮಾಡಿ
Comments

ಬೆಂಗಳೂರು: ವೈದ್ಯಕೀಯ ಕೌನ್ಸೆಲಿಂಗ್‌ ಸಮಿತಿ (ಎಂಸಿಸಿ) ಎರಡನೇ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶವನ್ನು ಗುರುವಾರ ಪ್ರಕಟಿಸಿದೆ. ಆ ಸೀಟನ್ನೇ ಉಳಿಸಿಕೊಳ್ಳಲು ಬಯಸುವವರು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಹಂಚಿಕೆಯಾದ ಸೀಟನ್ನು ರದ್ದುಪಡಿಸಿಕೊಳ್ಳಲು ಸೆ.20ರ ಮಧ್ಯಾಹ್ನ 2ರವರೆಗೆ ಅವಕಾಶ ನೀಡಲಾಗಿದೆ.

ವಿದ್ಯಾರ್ಥಿಗಳು ಕೆಇಎ ಕಚೇರಿಗೆ ಖುದ್ದಾಗಿ ಹಾಜರಾಗಿ ರದ್ದುಪಡಿಸಿಕೊಳ್ಳಬೇಕು. ₹10,000 ದಂಡ ವಿಧಿಸಿ, ಉಳಿದ ಮೊತ್ತವನ್ನು ಹಿಂದಿರುಗಿಸಲಾಗುವುದು. ಸೀಟು ರದ್ದುಪಡಿಸಿಕೊಳ್ಳುವ ಸಮಯದಲ್ಲಿ ಎಂಸಿಸಿ ಇಂದ ಹಂಚಿಕೆಯಾದ ಸೀಟುಗಳ ವಿವರವನ್ನೂ ಸಲ್ಲಿಸಬೇಕು. ನಂತರ ಎಲ್ಲಾ ಸೀಟುಗಳನ್ನು ಪರಿಗಣಿಸಿ, ಎರಡನೇ ಸುತ್ತಿನ ಅಂತಿಮ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT