ಬೆಂಗಳೂರು: ‘ನೀಟ್ ಪರೀಕ್ಷೆ ಬಗ್ಗೆ ಟೀಕೆ ಮಾಡುವವರು ಮೊದಲು ಕರ್ನಾಟಕ ಲೋಕಸೇವಾ ಆಯೋಗವನ್ನು ಸರಿಪಡಿಸಲಿ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

‘ಕಾಂಗ್ರೆಸ್ ಆಡಳಿತ ಕಾಲದಲ್ಲೇ ಕೆಪಿಎಸ್ಸಿ ಸರಿಪಡಿಸಲು ಆಗದಷ್ಟು ಹಾಳಾಗಿದೆ. ಎಲ್ಲವನ್ನೂ ತೊಳೆಯುತ್ತೇವೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಾವ ರೀತಿ ತೊಳೆದರು ಎನ್ನುವುದು ಗೊತ್ತಿದೆ. ‘ರೀಡೂ’ ಮಾಡಿಕೊಟ್ಟ ವ್ಯಕ್ತಿಯನ್ನೇ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿದರು. ಬೀದಿಯಲ್ಲಿ ಹುದ್ದೆಗಳಿಗೆ ಹರಾಜು ಹಾಕಲಾಗಿದೆ. ನೀಟ್ ಪರೀಕ್ಷೆ ಬಗ್ಗೆ ಟೀಕಿಸುವವರು ಕರ್ನಾಟಕದಲ್ಲಿ ಎಷ್ಟು ಬಾರಿ ಪರೀಕ್ಷೆ ಮುಂದಕ್ಕೆ ಹಾಕಿದ್ದಾರೆ ಎಂದು ಜನರಿಗೆ ತಿಳಿಸಲಿ’ ಎಂದು ಆಗ್ರಹಿಸಿದರು.

‘ರಾಜಸ್ಥಾನದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆಗಿದೆ ಎಂದು ಹೇಳಲಾಗುತ್ತಿದೆ. ಯಾರೋ ಮಾಡಿದ ತಪ್ಪಿಗೆ ಸರ್ಕಾರದ ಮೇಲೆ ತಪ್ಪು ಹೊರಿಸಲು ಆಗೋದಿಲ್ಲ. ಕೇಂದ್ರ ಸರ್ಕಾರ ಈಗಾಗಲೇ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. ತಪ್ಪಿತಸ್ಥರು ತಪ್ಪಿಸಿಕೊಳ್ಳಲು ಆಗುವುದಿಲ್ಲ’ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-51-1492728278

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.