ಬೆಂಗಳೂರು: ‘ರಾಜ್ಯ ಕೋಟಾದ ವೈದ್ಯಕೀಯ ಸೀಟುಗಳನ್ನು ಭರ್ತಿ ಮಾಡಿಕೊಳ್ಳಲು ಆಯಾ ರಾಜ್ಯಗಳಿಗೇ ಅಧಿಕಾರ ನೀಡಬೇಕು. ಕರ್ನಾಟಕದಲ್ಲಿ ಪರೀಕ್ಷೆ ಆಯೋಜಿಸುವ ಸಾಮರ್ಥ್ಯ ಕೆಇಎಗೆ ಇದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಅಖಿಲ ಭಾರತ ಕೋಟಾದ ಸೀಟುಗಳಿಗೆ ಮಾತ್ರ ನೀಟ್ ನಡೆಸಬೇಕು’ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಆಗ್ರಹಿಸಿದರು.

ಪ್ರಶ್ನೆಪತ್ರಿಕೆ ಸೋರಿಕೆ ಕಾರಣಕ್ಕೆ ನೀಟ್ ಪರೀಕ್ಷೆ ರದ್ದಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ‘ರಾಜ್ಯದಲ್ಲಿ 10 ಸಾವಿರಕ್ಕೂ ಹೆಚ್ಚು ವೈದ್ಯಕೀಯ ಸೀಟುಗಳು ಲಭ್ಯವಿದ್ದು, ಶೇ 15ರಷ್ಟು ಸೀಟುಗಳನ್ನು ಮಾತ್ರ ಅಖಿಲ ಭಾರತ ಕೋಟಾದಲ್ಲಿ ಭರ್ತಿ ಮಾಡಲಾಗುತ್ತದೆ. ಉಳಿದ ಶೇ 85ರಷ್ಟು ಸಿಟುಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ ಹಂಚಿಕೆ ಮಾಡುತ್ತದೆ. ಹಾಗಾಗಿ, ರಾಜ್ಯ ಕೋಟಾದ ಸೀಟುಗಳಿಗೆ ಸಿಇಟಿ ಮಾದರಿಯಲ್ಲೇ ಪರೀಕ್ಷೆ ನಡೆಸಲು ಅನುಮತಿ ನೀಡಬೇಕು ಎನ್ನುವುದು ರಾಜ್ಯದ ಬೇಡಿಕೆ. ಇದರಿಂದ ಸಿಇಟಿ ಪ್ರಕ್ರಿಯೆಯಲ್ಲಿನ ವಿಳಂಬವನ್ನೂ ತಪ್ಪಿಸಬಹುದು’ ಎಂದರು.

‘ಎಂಜಿನಿಯರಿಂಗ್ ಪ್ರವೇಶಕ್ಕೆ ಸಿಇಟಿ ನಡೆಸಲಾಗುತ್ತದೆ. ಫಲಿತಾಂಶದ ನಂತರ ಅರ್ಹತಾಪಟ್ಟಿ ಸಿದ್ಧಪಡಿಸುವಾಗ ದ್ವಿತೀಯ ಪಿಯು ಅಂಕಗಳಲ್ಲಿ ಶೇ 50ರಷ್ಟು ಪರಿಗಣಿಸಿ ಅರ್ಹತಾ ಪಟ್ಟಿ ಸಿದ್ಧಪಡಿಸಲಾಗುತ್ತದೆ. ಆದರೆ, ನೀಟ್ನಲ್ಲಿ ದ್ವಿತೀಯ ಪಿಯು ಅಂಕಗಳನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ. ಇದು ವಿದ್ಯಾರ್ಥಿಗಳನ್ನು ಒತ್ತಡಕ್ಕೆ ತಳ್ಳುತ್ತದೆ. ಹಾಗಾಗಿ, ಪರೀಕ್ಷಾ ಕ್ರಮ ಬದಲಾಯಿಸಬೇಕು’ ಎಂದೂ ಒತ್ತಾಯಿಸಿದರು.

ಕೇಂದ್ರದ ದೊಡ್ಡ ಹಗರಣ: ಸಚಿವ

‘ರಾಜಸ್ಥಾನ, ಹರಿಯಾಣದ ಕೋಚಿಂಗ್ ಸೆಂಟರ್ಗಳು ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಮಾಡಿಸಿವೆ. ಕೇಂದ್ರ ಸರ್ಕಾರದ ಪಾಲೂ ಇದೆ. ಇದು ಕೇಂದ್ರ ಸರ್ಕಾರದ ದೊಡ್ಡ ಹಗರಣ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ಆರೋಪಿಸಿದರು.

‘ನಾಲ್ಕೈದು ವರ್ಷಗಳಿಂದ ನೀಟ್ನಲ್ಲಿ ಒಂದಲ್ಲ ಒಂದು ಗೊಂದಲಗಳು, ಅಕ್ರಮಗಳು ನಡೆಯುತ್ತಲೇ ಇವೆ. ಪ್ರತಿ ವರ್ಷ ಆಗುತ್ತಿರುವ ಪ್ರಮಾದವನ್ನು ಸರಿಪಡಿಸಲು ಕೇಂದ್ರ ಸರ್ಕಾರಕ್ಕೆ ಆಗುತ್ತಿಲ್ಲ. ಸರ್ಕಾರ ಸಂಪೂರ್ಣ ಅಸಮರ್ಥವಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಹಿಂದೆ ಕೋಟ್ಯಂತರ ರೂಪಾಯಿ ವಹಿವಾಟು ನಡೆದಿರುತ್ತದೆ. ಇದಕ್ಕೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೇ ಹೊಣೆ. ಲಕ್ಷಾಂತರ ವಿದ್ಯಾರ್ಥಿಗಳ ಬಾಳಿನ ಜತೆಗೆ ಚೆಲ್ಲಾಟವಾಡಿದ ಕೇಂದ್ರ ಶಿಕ್ಷಣ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೊಡ್ಡ ದೊಡ್ಡ ಭಾಷಣ ಮಾಡುವ ಬದಲು, ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸಬೇಕು’ ಎಂದು ಆಗ್ರಹಿಸಿದರು.

ಸುಧಾರಣೆಗೆ ಮಧು ಬಂಗಾರಪ್ಪ ಒತ್ತಾಯ

‘ನೀಟ್ ರದ್ದುಗೊಳಿಸಿ, ಸಿಬಿಐ ತನಿಖೆಗೆ ಆದೇಶಿಸಿದರೆ ಸಾಲದು ಇಂತಹ ಘಟನೆಗಳು ಮರುಕಳಿಸದಂತೆ ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು’ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಒತ್ತಾಯಿಸಿದರು.

ಕೇಂದ್ರ ಸರ್ಕಾರದ ವಿವಿಧ ಸಂಸ್ಥೆಗಳು ನಡೆಸುವ ಪರೀಕ್ಷೆಗಳ ಮೇಲೆ ಜನರಿಗೆ ಇರುವ ನಂಬಿಕೆ ನಾಶವಾಗುತ್ತಿದೆ. ಪರೀಕ್ಷಾ ವ್ಯವಸ್ಥೆಯು ಹಳ್ಳ ಹಿಡಿಯುತ್ತಿರುವುದು ವಿದ್ಯಾರ್ಥಿಗಳ ಮಾನಸಿಕ ಸ್ಥಿತಿಯ ಮೇಲೆ ಪರಿಣಾಮ ಬೀರುತ್ತಿದೆ. ವರ್ಷಗಟ್ಟಲೆ ಹಗಲಿರುಳು ಶ್ರಮಪಟ್ಟು ಪರೀಕ್ಷೆ ಬರೆದಿದ್ದ ಲಕ್ಷಾಂತರ ಮಕ್ಕಳ ಮೇಲೆ ಮರುಪರೀಕ್ಷೆಯ ಗದಾಪ್ರಹಾರ ಮಾಡಲಾಗಿದೆ ಎಂದು ದೂರಿದ್ದಾರೆ.

‘ಶಾಲಾ ಹಂತದಲ್ಲಿ ಮಕ್ಕಳ ಶೈಕ್ಷಣಿಕ ಹಾಗೂ ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ನಿರಂತರವಾಗಿ ಪ್ರಯತ್ನಿಸುತ್ತಿದ್ದೇವೆ. ಆದರೆ, ಕೇಂದ್ರ ಸರ್ಕಾರದ ಇಂತಹ ನಿರ್ಧಾರಗಳು ಮಕ್ಕಳನ್ನು ಮತ್ತು ಪೋಷಕರನ್ನು ಹತಾಶೆಯ ಕೂಪಕ್ಕೆ ತಳ್ಳುತ್ತಿವೆ. ತನ್ನ ಜವಾಬ್ದಾರಿಗಳನ್ನು ನಿರ್ವಹಿಸುವಲ್ಲಿ ಕೇಂದ್ರ ಸಂಪೂರ್ಣ ವಿಫಲವಾಗಿದೆ’ ಎಂದು ಅವರು ಆರೋಪಿಸಿದರು.

ವಿದ್ಯಾರ್ಥಿಗಳ ಮೇಲೆ ದುಷ್ಪರಿಣಾಮ

ಮಂಗಳೂರು: ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (ಎನ್ಟಿಎ) ವೈದ್ಯಕೀಯ ಪದವಿ ಪ್ರವೇಶಕ್ಕಾಗಿ ನಡೆಸಿದ್ದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್ ಯುಜಿ-2026) ರದ್ದುಗೊಳಿಸಿ ಮರು ಪರೀಕ್ಷೆ ನಡೆಸುವ ನಿರ್ಧಾರಕ್ಕೆ ಕರ್ನಾಟಕ ಅನುದಾನರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ (ಕುಪ್ಮ) ಬೇಸರ ವ್ಯಕ್ತಪಡಿಸಿದೆ.

‘ಪ್ರಶ್ನೆ ಪತ್ರಿಕೆ ಸೋರಿಕೆ ದೃಢ ಪಟ್ಟಿದ್ದರಿಂದ ನೀಟ್ ಯುಜಿ – 2026ರ ಪರೀಕ್ಷೆಯನ್ನು ರದ್ದುಗೊಳಿಸುವ ನಿರ್ಣಯವನ್ನು ಎನ್ಟಿಎ ತೆಗೆದುಕೊಂಡಿದೆ. ಪ್ರಶ್ನೆಪತ್ರಿಕೆ ಸೋರಿಕೆ ಮಾಡಿರುವ ವ್ಯಕ್ತಿಗಳ ಅಥವಾ ಸಂಸ್ಥೆಯ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು. ತಪ್ಪಿತಸ್ಥರು ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಬೇಕು’ ಎಂದು ಸಂಘ ಆಗ್ರಹಿಸಿದೆ.

‘23 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವರ್ಷ ಪೂರ್ತಿ ತಯಾರಿ ನಡೆಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮರು ಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಇಂತಹ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆಗದಂತೆ ಕೇಂದ್ರ ಸರ್ಕಾರ ಮುತುವರ್ಜಿ ವಹಿಸಬೇಕು’ ಎಂದು ಕುಪ್ಮ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಮತ್ತು ಕಾರ್ಯದರ್ಶಿ ಪ್ರೊ.ನರೇಂದ್ರ ಎಲ್ ನಾಯಕ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನೀಟ್ ಟೀಕೆಗೆ ಮೊದಲು ಕೆಪಿಎಸ್ಸಿ ಸರಿಪಡಿಸಿ: ಎಚ್ಡಿಕೆ

ಬೆಂಗಳೂರು: ‘ನೀಟ್ ಪರೀಕ್ಷೆ ಬಗ್ಗೆ ಟೀಕೆ ಮಾಡುವವರು ಮೊದಲು ಕರ್ನಾಟಕ ಲೋಕಸೇವಾ ಆಯೋಗವನ್ನು ಸರಿಪಡಿಸಲಿ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

‘ಕಾಂಗ್ರೆಸ್ ಆಡಳಿತ ಕಾಲದಲ್ಲೇ ಕೆಪಿಎಸ್ಸಿ ಸರಿಪಡಿಸಲು ಆಗದಷ್ಟು ಹಾಳಾಗಿದೆ. ಎಲ್ಲವನ್ನೂ ತೊಳೆಯುತ್ತೇವೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಾವ ರೀತಿ ತೊಳೆದರು ಎನ್ನುವುದು ಗೊತ್ತಿದೆ. ‘ರೀಡೂ’ ಮಾಡಿಕೊಟ್ಟ ವ್ಯಕ್ತಿಯನ್ನೇ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿದರು. ಬೀದಿಯಲ್ಲಿ ಹುದ್ದೆಗಳಿಗೆ ಹರಾಜು ಹಾಕಲಾಗಿದೆ. ನೀಟ್ ಪರೀಕ್ಷೆ ಬಗ್ಗೆ ಟೀಕಿಸುವವರು ಕರ್ನಾಟಕದಲ್ಲಿ ಎಷ್ಟು ಬಾರಿ ಪರೀಕ್ಷೆ ಮುಂದಕ್ಕೆ ಹಾಕಿದ್ದಾರೆ ಎಂದು ಜನರಿಗೆ ತಿಳಿಸಲಿ’ ಎಂದು ಆಗ್ರಹಿಸಿದರು.

‘ರಾಜಸ್ಥಾನದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆಗಿದೆ ಎಂದು ಹೇಳಲಾಗುತ್ತಿದೆ. ಯಾರೋ ಮಾಡಿದ ತಪ್ಪಿಗೆ ಸರ್ಕಾರದ ಮೇಲೆ ತಪ್ಪು ಹೊರೆಸಲು ಆಗೋದಿಲ್ಲ. ಕೇಂದ್ರ ಸರ್ಕಾರ ಈಗಾಗಲೇ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. ತಪ್ಪಿತಸ್ಥರು ತಪ್ಪಿಸಿಕೊಳ್ಳಲು ಆಗುವುದಿಲ್ಲ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-51-557424026

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.