ಮಂಗಳೂರು: ಜವಾಹರಲಾಲ್ ನೆಹರೂ ಅವರು ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸುಧಾರಣೆಗಳ ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೆ ತಂದು ಆಧುನಿಕ ಭಾರತದ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದವರು ಎಂದು ಕೆಪಿಸಿಸಿ ಉಪಾಧ್ಯಕ್ಷ ಬಿ.ರಮನಾಥ ರೈ ಹೇಳಿದರು.

ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಬುಧವಾರ ಆಯೋಜಿಸಿದ್ದ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ನೆಹರೂ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.

ನೆಹರೂ ಪ್ರಧಾನಿಯಾಗಿದ್ದ 17 ವರ್ಷಗಳ ಅವಧಿಯಲ್ಲಿ ಶಿಕ್ಷಣ ಸಂಸ್ಥೆಗಳು, ವಿಜ್ಞಾನ-ಸಂಶೋಧನಾ ಸಂಸ್ಥೆಗಳು, ತಾಂತ್ರಿಕ ಕಾಲೇಜುಗಳು, ವೈದ್ಯಕೀಯ ಅಧ್ಯಯನ ಸಂಸ್ಥೆಗಳು, ಅಣೆಕಟ್ಟೆಗಳು, ಆಸ್ಪತ್ರೆಗಳು, ಕೈಗಾರಿಕಾ ಕೇಂದ್ರಗಳನ್ನು ಸ್ಥಾಪಿಸಿ ಸಾಮಾಜಿಕ ಕ್ರಾಂತಿಯ ಹರಿಕಾರ ರೆನಿಸಿದರು. ಭಾರತವು ವಿಶ್ವದ ಪ್ರಮುಖ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲು ನೆಹರೂ ಜಾರಿಗೆ ತಂದ ಪಂಚವಾರ್ಷಿಕ ಯೋಜನೆಗಳೇ ಕಾರಣ ಎಂದರು.

‘ಮೂಡ’ ಅಧ್ಯಕ್ಷ ಸದಾಶಿವ ಉಳ್ಳಾಲ್, ಮುಖಂಡರಾದ ಸುರೇಂದ್ರ ಕಂಬಳಿ, ಆರ್.ಕೆ.ಪೃಥ್ವಿರಾಜ್, ಅಬ್ದುಲ್ ರವೂಫ್, ಜಯಶೀಲ ಅಡ್ಯಂತಾಯ, ಅಬ್ಬಾಸ್ ಅಲಿ, ಎಸ್.ಅಪ್ಪಿ, ಶುಭೋದಯ ಆಳ್ವ, ನೀರಜ್ ಚಂದ್ರಪಾಲ್, ಟಿ.ಕೆ.ಸುಧೀರ್, ಭಾಸ್ಕರ್ ರಾವ್, ವಿಕಾಸ್ ಶೆಟ್ಟಿ, ಶಬೀರ್ ಎಸ್, ಗಣೇಶ್ ಪೂಜಾರಿ, ಯೋಗೀಶ್ ಕುಮಾರ್, ಆರಿಫ್ ಬಾವಾ ಬಂದರ್, ದಿನೇಶ್ ಕುಂಪಲ, ರಮಾನಂದ ಪೂಜಾರಿ, ಸಬಿತಾ ಮಿಸ್ಕಿತ್, ನಮಿತಾ ಡಿ.ರಾವ್, ಮಂಜುಳಾ ನಾಯಕ್, ಚಂದ್ರ ಕಲಾ ಜೋಗಿ, ಚಂದ್ರಹಾಸ ಪೂಜಾರಿ, ಮಲ್ಲಿಕಾರ್ಜುನ ಕೋಡಿಕಲ್, ರವಿರಾಜ್ ಪೂಜಾರಿ, ಸಮರ್ಥ್ ಭಟ್, ನಝೀರ್ ಬಜಾಲ್ ಉಪಸ್ಥಿತರಿದ್ದರು. ಶಶಿಧರ್ ಹೆಗ್ಡೆ ಸ್ವಾಗತಿಸಿದರು. ಜೋಕಿಂ ಡಿಸೋಜ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-29-87345265

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.