ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆಹರೂ ಯುವ ಕೇಂದ್ರದಿಂದ ‘ಯುವ ಉತ್ಸವ ಇಂಡಿಯಾ@2047’

Published 30 ನವೆಂಬರ್ 2023, 14:11 IST
Last Updated 30 ನವೆಂಬರ್ 2023, 14:11 IST
ಅಕ್ಷರ ಗಾತ್ರ

ಬೆಂಗಳೂರು: ನೆಹರೂ ಯುವ ಕೇಂದ್ರ ಸಂಘಟನೆ ವತಿಯಿಂದ ಡಿ. 1 ಮತ್ತು 2 ರಂದು ‘ಯುವ ಉತ್ಸವ ಇಂಡಿಯಾ@2047’ ಎಂಬ ರಾಜ್ಯಮಟ್ಟದ ಯುವ ಉತ್ಸವವನ್ನು ನಗರದ ಸೆಂಟ್ರಲ್‌ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ದಕ್ಷಿಣ ರಾಜ್ಯಗಳ ಪ್ರಾದೇಶಿಕ ನಿರ್ದೇಶಕ ಎಂ.ಎನ್. ನಟರಾಜ್ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಾದ್ಯಂತ ನಡೆದ ಜಿಲ್ಲಾಮಟ್ಟದ ಉತ್ಸವಗಳಲ್ಲಿ ಆಯ್ಕೆಯಾದ 31 ಜಿಲ್ಲೆಗಳ 550 ಯುವಜನರು ಈ ಉತ್ಸವದಲ್ಲಿ ಭಾಗವಹಿಸಲಿದ್ದಾರೆ. ಚಿತ್ರಕಲೆ ಸ್ಪರ್ಧೆ, ಕವನ ರಚನಾ ಸ್ಪರ್ಧೆ, ಫೋಟೊಗ್ರಫಿ ಸ್ಪರ್ಧೆ, ಭಾಷಣ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ಮಾಹಿತಿ ನೀಡಿದರು.

‘ಕೇಂದ್ರ ಸಚಿವ ಭಗವಂತ ಖೂಬಾ ಅವರು ಉತ್ಸವವನ್ನು ಉದ್ಘಾಟಿಸಿಲಿದ್ದಾರೆ. ರಾಜ್ಯ ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ. ನಾಗೇಂದ್ರ, ಶಾಸಕ ರಿಜ್ವಾನ್‌ ಅರ್ಷದ್, ಸಂಸದರಾದ ಪಿ.ಸಿ. ಮೋಹನ್, ತೇಜಸ್ವಿ ಸೂರ್ಯ, ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಪತಿ ಲಿಂಗರಾಜ ಗಾಂಧಿ ಭಾಗವಹಿಸಲಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT