ಬೆಂಗಳೂರು: ‘ಮುಂದಿನ ವರ್ಷ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ವಿಧಾನಸೌಧದ ಮುಂಭಾಗದಲ್ಲಿ ಆಚರಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಭಾನುವಾರ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ‘ಬೋಸ್ ಅವರ ಪ್ರತಿಮೆಯನ್ನು ವಿಧಾನಸೌಧದ ಮುಂಭಾಗದ ಸೂಕ್ತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗುವುದು’ ಎಂದರು.

‘ಬೋಸ್ ಅವರ ಪ್ರತಿಮೆಯನ್ನು ಸ್ಥಳಾಂತರಿಸುವ ಮೂಲಕ ವಿಧಾನಸೌಧದ ಮುಂಭಾಗದಲ್ಲಿ ಗೌರವಯುತ ಸ್ಥಾನ ನೀಡಬೇಕಿದೆ. ಆ ಕೆಲಸವನ್ನು ಕೂಡಲೇ ಮಾಡುತ್ತೇನೆ‘ ಎಂದರು.

‘ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನವನ್ನು ಇಡೀ ವರ್ಷ ಆಚರಿಸಲಾಗುವುದು. ಅವರ ಧ್ಯೇಯ, ಆದರ್ಶಗಳನ್ನು ಇಂದಿನ ಮಕ್ಲಳಿಗೆ ಪರಿಚಯಿಸಲು ಶಾಲೆ, ಕಾಲೇಜುಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಬೋಸ್ ಅವರಿಗೆ ಸಂಬಂಧಿಸಿದಂತೆ ಬೇರೆ ಬೇರೆ ಲೇಖಕರು ಬರೆದ ಕೃತಿಗಳನ್ನು ಕನ್ನಡದಲ್ಲಿ ಮುದ್ರಿಸಿ ಯುವಕರಿಗೆ ಮುಟ್ಟಿಸುವ ಕೆಲಸವನ್ನೂ ಮಾಡುತ್ತೇವೆ’ ಎಂದರು

ನೇತಾಜಿ ಸುಭಾಸ್ ಚಂದ್ರ ಬೋಸ್ ಜಯಂತಿ: ಗಣ್ಯರಿಂದ ಗೌರವ ನಮನ

‘ಬೋಸ್ ಅವರ ಮೇಲಿನ ಅಪ್ರತಿಮ ಪ್ರೀತಿ, ವಿಶ್ವಾಸದಿಂದ ಹಲವು ಸಂಘಟನೆಗಳು ಕೆಲ ಮಾಡುತ್ತಿವೆ. ಆ ಸಂಘಟನೆಗಳ ಬೇಡಿಕೆಗಳಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ‘ ಎಂದೂ ಹೇಳಿದರು.

‘ಇಂದು ಸಂಜೆ ಜಕ್ಕೂರು ನವೀಕೃತ ಸರ್ಕಾರಿ ವೈಮಾನಿಕ ತರಬೇತಿ ಶಾಲೆಯ ಲೋಕಾರ್ಪಣೆ ನೆಯಲಿದೆ. ಈ ಕಾರ್ಯಕ್ರಮದಲ್ಲಿ ವಿಮಾನ ಚಾಲಕ ತರಬೇತಿ ಶಾಲೆಯನ್ನು ಮತ್ತೆ ಆರಂಭಿಸಲಾಗುವುದು. ಕಾರ್ಯಕ್ರಮದಲ್ಲಿ ಯುವಕರ ಸಬಲೀಕರಣಕ್ಕೆ ಹಲವಾರು ಹೊಸ ಕಾರ್ಯಕ್ರಮಗಳನ್ನು ಘೋಷಣೆ ಮಾಡಲಿದ್ದೇನೆ‘ ಎಂದರು.

ಬಾಡಿಗೆ ತಾಯ್ತನದಿಂದ ಬಡ ಮಹಿಳೆಯರ ಮೇಲೆ ಶೋಷಣೆ: ತಸ್ಲೀಮಾ ಆಕ್ರೋಶ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.