ಬೆಂಗಳೂರು: ಟಾಟಾ ಕಂಪನಿಯ ಸಹಯೋಗದಲ್ಲಿ ರಾಜ್ಯದ 150 ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು (ಐಟಿಐ) ಉನ್ನತೀಕರಿಸಲಾಗುತ್ತಿದ್ದು, ಈ ಕಾರ್ಯಕ್ರಮದ ಅಡಿಯಲ್ಲಿ ಐಟಿಐಗೆ 6 ಹೊಸ ಕೋರ್ಸ್‌ಗಳನ್ನು ಸೇರ್ಪಡೆ ಮಾಡಲು ನಿರ್ಧರಿಸಲಾಗಿದೆ. ಇದಕ್ಕೆ ರಾಜ್ಯ ವೃತ್ತಿಶಿಕ್ಷಣ ಪರಿಷತ್ (ಎಸ್.ವಿ.ಸಿ.ಟಿ.) ಅನುಮೋದನೆ ನೀಡಿದೆ.

ಉನ್ನತ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಂಗಳವಾರ ಈ ನಿರ್ಧಾರ ಕೈಗೊಳ್ಳಲಾಗಿದೆ.

‘ಇದು 150 ಐಟಿಐಗಳಿಗೂ ಅನ್ವಯವಾಗಲಿದ್ದು, ಪ್ರಸಕ್ತ ಸಾಲಿನಿಂದಲೇ ವಿದ್ಯಾರ್ಥಿಗಳ ಪ್ರವೇಶಾತಿಗೆ ಅನುಕೂಲ ಮಾಡಿಕೊಡುವುದಕ್ಕಾಗಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ’ ಎಂದು ಅಶ್ವತ್ಥನಾರಾಯಣ ತಿಳಿಸಿದ್ದಾರೆ.

‘ಹೊಸ ಕೋರ್ಸ್‌ಗಳಿಗೆ ರಾಷ್ಟ್ರೀಯ ವೃತ್ತಿಶಿಕ್ಷಣ ತರಬೇತಿ ಪರಿಷತ್ (ಎನ್.ಸಿ.ವಿ.ಇ.ಟಿ.) ಮಾನ್ಯತೆ ಸಿಗಬೇಕಿದೆ. ಇವುಗಳ ಪಠ್ಯಕ್ರಮಕ್ಕೆ ನವದೆಹಲಿಯ ತರಬೇತಿ ಮಹಾನಿರ್ದೇಶನಾಲಯದಿಂದ (ಡಿ.ಜಿ.ಟಿ.) ಅನುಮೋದನೆ ಪಡೆಯಬೇಕಿದೆ. ಪಠ್ಯಕ್ರಮವನ್ನು ಈಗಾಗಲೇ ಡಿ.ಜಿ.ಟಿ.ಗೆ ಸಲ್ಲಿಸಲಾಗಿದೆ. ವಿದ್ಯಾರ್ಥಿಗಳ ಪ್ರವೇಶಾತಿಗೆ ಅನುಕೂಲ ಮಾಡಿಕೊಡುವುದಕ್ಕಾಗಿ ಎನ್.ಸಿ.ವಿ.ಇ.ಟಿ.ಯಿಂದ ಮಾನ್ಯತೆ ಪಡೆಯುವ ಷರತ್ತಿಗೆ ಒಳಪಟ್ಟು ಈನಿರ್ಣಯ ತೆಗೆದುಕೊಳ್ಳಲಾಗಿದೆ’ ಎಂದೂ ಹೇಳಿದ್ದಾರೆ.

‘23 ಅಲ್ಪಾವಧಿ (3 ತಿಂಗಳು) ಸರ್ಟಿಫೈಡ್ ಕೋರ್ಸ್‌ಗಳ ಆರಂಭಕ್ಕೂ ಎಸ್.ವಿ.ಸಿ.ಟಿ.ಯು ಅನುಮೋದನೆ ನೀಡಿದೆ’ ಎಂದು ತಿಳಿಸಿದ್ದಾರೆ.

ಕೌಶಲಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಆಯುಕ್ತ ಕೆ.ಹರೀಶ್ ಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.