ಬೆಂಗಳೂರು: ‘ಪದವಿ ಕಾಲೇಜುಗಳ ಪ್ರಾಧ್ಯಾಪಕರ ವರ್ಗಾವಣೆಗೆ ಈಗಿರುವ ಕಾನೂನು ರದ್ದುಗೊಳಿಸಿ, ಹೊಸ ನಿಯಮಗಳನ್ನು ರೂಪಿಸಲಾಗುವುದು. ಅದನ್ನು ಈ ವರ್ಷದಿಂದಲೇ ಜಾರಿಗೆ ತರಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರೊಂದಿಗೆ ಗುರುವಾರ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಕಳೆದ 3-4 ವರ್ಷಗಳಿಂದ ಪ್ರಾಧ್ಯಾಪಕರ ವರ್ಗಾವಣೆ ಆಗಿಲ್ಲ.ಹಾಗಾಗಿ ಈ ಶೈಕ್ಷಣಿಕ ವರ್ಷ ಆರಂಭಕ್ಕೂ ಮೊದಲೇ ಹೊಸ ನಿಯಮಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದರು.

ವರ್ಗಾವಣೆ ಕುರಿತು ಕರಡು ನಿಯಮರೂಪಿಸಿ ಪ್ರಾಧ್ಯಾಪಕರ ಸಂಘದವರಿಗೆ ಮತ್ತು ಸಂಬಂಧಪಟ್ಟ ಎಲ್ಲರಿಗೂಕಳುಹಿಸಿ, ಸಲಹೆಗಳನ್ನು ಪಡೆಯಲಾಗುವುದು. ನಂತರ ಕಾನೂನು ತಿದ್ದುಪಡಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.