ಬೆಂಗಳೂರು: ಗದಗದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ವಿಶ್ವವಿದ್ಯಾಲಯದ ಕುಲಪತಿಯನ್ನಾಗಿ ಡಾ.ವಿಷ್ಣುಕಾಂತ ಎಸ್.ಚಟ್ಟಪಲ್ಲಿ ಅವರನ್ನು ರಾಜ್ಯಪಾಲರು ನೇಮಕ ಮಾಡಿದ್ದಾರೆ. ಅವರು ಇದುವರೆಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ಎಂಬಿಎ ವಿಭಾಗದ ಪ್ರೊಫೆಸರ್ ಆಗಿದ್ದರು.
ಈ ಹಿಂದಿನ ಕುಲಪತಿ ಪ್ರೊ.ಬಿ.ತಿಮ್ಮೇಗೌಡ ಅವರು 2019ರ ಆಗಸ್ಟ್ 7ರಂದು ನಿವೃತ್ತರಾಗಿದ್ದರು. ಬಳಿಕ ಕುಲಸಚಿವ ಡಾ.ಸುರೇಶ್ ವಿ.ನಾಡಗೌಡರ್ ಅವರು ಹಂಗಾಮಿ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದರು.