ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಣ್ಗಾವಲಿಗಾಗಿ ಬೆಂಗಳೂರಿನಲ್ಲಿ 20 ಸಾವಿರ, ಜಿಲ್ಲೆಗಳಿಗೆ ತಲಾ 1,200 ಪೊಲೀಸರನ್ನು ನಿಯೋಜಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಹೊಸ ವರ್ಷಾಚರಣೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಮಹಿಳೆಯರ ಸುರಕ್ಷತೆಗೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಅಗತ್ಯ ಇರುವ ಸ್ಥಳಗಳಲ್ಲಿ ಮಹಿಳಾ ಪೊಲೀಸರನ್ನು ನಿಯೋಜನೆ ಮಾಡಬೇಕು. ಕಿಡಿಗೇಡಿಗಳ ಮೇಲೆ ನಿರಂತರ ನಿಗಾ ಇರಿಸಬೇಕು. ವ್ಹೀಲಿಂಗ್ ಮಾಡುವುದಕ್ಕೆ ಅವಕಾಶ ನೀಡಬಾರದು. ಮಾದಕ ದ್ರವ್ಯ ಚಟುವಟಿಕೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ, ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ ರಾವ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.