ಮಡಿಕೇರಿ: ಕೊಡಗಿನ ಹಿರಿಯ ರಂಗಭೂಮಿ ನಟಿ ಅಡ್ಡಂಡ ಅನಿತಾ ಕಾರ್ಯಪ್ಪ ಅವರಿಗೆ ಈ ಬಾರಿಯ ಪ್ರತಿಷ್ಠಿತ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಲಭಿಸಿದೆ.

ಮಾರ್ಚ್ 8ರಂದು ಮಹಿಳಾ ದಿನಾಚರಣೆ ದಿನದಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಇಲಾಖೆ ನಿರ್ದೇಶಕ ಕೆ.ಎ.ದಯಾನಂದ್ ಅವರು ಮಾಹಿತಿ ನೀಡಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಕರ್ನಾಟಕ ಸರ್ಕಾರ ಕೊಡಮಾಡುವ ಈ ಪ್ರಶಸ್ತಿ ₹ 25 ಸಾವಿರ ನಗದು ಮತ್ತು ಪ್ರಶಸ್ತಿ ಪಲಕ ಒಳಗೊಂಡಿದೆ.

ಅನಿತಾ ಕಾರ್ಯಪ್ಪ ಕಳೆದ 40 ವರ್ಷಗಳಿಂದ ನಿರಂತರವಾಗಿ ಕೊಡಗಿನಲ್ಲಿ ರಂಗಭೂಮಿ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡ ಮತ್ತು ಕೊಡವ ಭಾಷೆಯಲ್ಲಿ ಕೊಡಗಿನಲ್ಲಿ ರಂಗಭೂಮಿಯಲ್ಲಿ ನಿರಂತರವಾಗಿ ತೊಡಗಿಸಿಕೊಂಡ ಏಕೈಕ ನಟಿ.

ನೀನಾಸಂ ಪದವೀಧರೆಯಾದ ಇವರು ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಇವರಿಗೆ ನಾಟಕ ಅಕಾಡೆಮಿ, ಕೊಡವ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕೊಡಗು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಮತ್ತು ಮೈಸೂರು ದಕ್ಷಿಣ ವಲಯ ದಕ್ಷಿಣ ಕೇಸರಿ ಪ್ರಶಸ್ತಿಗಳು ಸಂದಿವೆ.

ಸುಮಾರು 80ಕ್ಕೂ ಹೆಚ್ಚು ನಾಟಕಗಳಲ್ಲಿ ನಟಿಸಿರುವ ಇವರು ಕೊಡವ ಭಾಷೆಯ ಚಲನಚಿತ್ರಗಳಲ್ಲೂ ನಟಿಸಿ ಗಮನ ಸೆಳೆದಿದ್ದಾರೆ. ಇತ್ತೀಚೆಗೆ ಇವರು ನಟಿಸಿದ ‘ಬದ್‌ಕ್’ (ಕೊಡವ) ಕನ್ನಡದಲ್ಲಿ ‘ಮಿಥುನ’ ನಾಟಕದ ನಟನೆ ತೀವ್ರ ಗಮನ ಸೆಳೆದಿತ್ತು.

ಇವರ ಪತಿ ಅಡ್ಡಂಡ ಸಿ.ಕಾರ್ಯಪ್ಪ ಪ್ರತಿಷ್ಠಿತ ಮೈಸೂರು ರಂಗಾಯಣದ ನಿರ್ದೇಶಕರಾಗಿದ್ದಾರೆ. ಪೊನ್ನಂಪೇಟೆಯಲ್ಲಿ ನೆಲೆಸಿರುವ ಅನಿತಾ ಮನೆಯನ್ನೇ ರಂಗಭೂಮಿ ಕಾರ್ಯಕ್ಷೇತ್ರವನ್ನಾಗಿಸಿ ದುಡಿಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.