ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

News Express | ಕೋಲಾರದ ಆನಂದ ಮಾರ್ಗ ಆಶ್ರಮದಲ್ಲಿ ಹೊಡೆದಾಟ: ಸ್ವಾಮೀಜಿ ಹತ್ಯೆ

Published 22 ಜೂನ್ 2024, 14:43 IST
Last Updated 22 ಜೂನ್ 2024, 14:43 IST
ಅಕ್ಷರ ಗಾತ್ರ

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಸಂತಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು, ಸ್ವಾಮೀಜಿಯೊಬ್ಬರನ್ನು ಕೊಲೆ ಮಾಡಲಾಗಿದೆ. ಆಚಾರ್ಯ ಚಿನ್ಮಯಾನಂದ ಸ್ವಾಮೀಜಿ (70) ಹತ್ಯೆಯಾದವರು. ಆಚಾರ್ಯ ಧರ್ಮ ಪ್ರಾಣಾನಂದ, ಪ್ರಾಣೇಶ್ವರಾನಂದ ಹಾಗೂ ಅರುಣ್ ಕುಮಾರ್‌ ಎಂಬುವರನ್ನು ಮಾಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಚಾರ್ಯ ಧರ್ಮ ಪ್ರಾಣಾನಂದ ಗುಂಪಿನಿಂದ ಹತ್ಯೆ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಮಾಲೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶನಿವಾರ ಬೆಳಿಗ್ಗೆ ಆರು ಗಂಟೆಗೆ ಸ್ವಾಮೀಜಿ ಮೇಲೆ ಹಲ್ಲೆ ನಡೆದಿದೆ. ಆಶ್ರಮದಲ್ಲಿ ಸ್ನಾನ ಮಾಡುತ್ತಿದ್ದ ಅವರನ್ನು ಹೊರಗೆ ಎಳೆದುಕೊಂಡು ಬಂದ ಆರೋಪಿಗಳು ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ಸ್ಥಳದಲ್ಲಿದ್ದವರು ಆರ್‌.ಎಲ್‌.ಜಾಲಪ್ಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಸ್ವಾಮೀಜಿ ಮೃತಪಟ್ಟರು ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT