ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Bandh | ಕಾವೇರಿಗಾಗಿ ಬಂದ್‌: ದಕ್ಷಿಣದಲ್ಲಿ ಉತ್ತಮ; ಉತ್ತರದಲ್ಲಿ ಮಿಶ್ರ ಸ್ಪಂದನೆ

Published 29 ಸೆಪ್ಟೆಂಬರ್ 2023, 2:21 IST
Last Updated 29 ಸೆಪ್ಟೆಂಬರ್ 2023, 13:25 IST
ಅಕ್ಷರ ಗಾತ್ರ
01:5529 Sep 2023

ರಾಜ್ಯದಾದ್ಯಂತ ಬಂದ್‌ಗೆ ಕರೆ

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಇಂದು (ಶುಕ್ರವಾರ) ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.

01:5629 Sep 2023

ಬೆಂಗಳೂರಿನಲ್ಲಿ ನಿಷೇಧಾಜ್ಞೆ

ರಾಜಧಾನಿ ಬೆಂಗಳೂರಿನಲ್ಲಿ ಸೆ. 28ರ ರಾತ್ರಿಯಿಂದ ಸೆ. 29ರ ರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಕಮಿಷನರ್ ಬಿ. ದಯಾನಂದ್ ಆದೇಶ ಹೊರಡಿಸಿದ್ದಾರೆ.

01:5729 Sep 2023

ವ್ಯಾಪಾರ–ವಹಿವಾಟು ಸ್ಥಗಿತ

ಬಹುತೇಕ ವ್ಯಾಪಾರಿಗಳು ಹಾಗೂ ಉದ್ಯಮಿಗಳು ಶುಕ್ರವಾರದ ಬಂದ್‌ ಬೆಂಬಲಿಸಿದ್ದಾರೆ. ಹೀಗಾಗಿ, ಅವರೆಲ್ಲರೂ ವ್ಯಾಪಾರ–ವಹಿವಾಟು ಸ್ಥಗಿತಗೊಳಿಸಲಿದ್ದಾರೆ.

01:5729 Sep 2023

ವಾಹನಗಳ ಓಡಾಟ ಬಂದ್

ಖಾಸಗಿ ವಾಹನಗಳು, ಆಟೊ, ಮ್ಯಾಕ್ಸಿಕ್ಯಾಬ್, ಓಲಾ–ಉಬರ್ ಕ್ಯಾಬ್, ಶಾಲೆ ವಾಹನಗಳ ಚಾಲಕರು ಹಾಗೂ ಮಾಲೀಕರು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆಟೊ ಹಾಗೂ ಖಾಸಗಿ ವಾಹನಗಳ ಓಡಾಟ ಬಂದ್ ಆಗುವ ಸಂಭವವಿದೆ.

01:5729 Sep 2023

ಭದ್ರತೆ ಇದ್ದರೆ ಹೋಟೆಲ್‌ ನಿರ್ವಹಣೆ

‘ವಾರದಲ್ಲಿ ಇದು ಎರಡನೇ ಬಂದ್. ಹೋಟೆಲ್‌ ನಂಬಿಕೊಂಡವರಿಗೆ ಒಂದನೇ ಬಂದ್‌ನಿಂದ ನಷ್ಟವಾಗಿದೆ. ಎರಡನೇ ಬಂದ್ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಭದ್ರತೆ ನೀಡಿದರೆ ಹೋಟೆಲ್ ತೆರೆಯುತ್ತೇವೆ’ ಎಂದು ರಾಜ್ಯ ಪ್ರದೇಶ ಹೋಟೆಲ್‌ ಮತ್ತು ಉಪಾಹಾರ ಮಂದಿರಗಳ ಸಂಘದ ಅಧ್ಯಕ್ಷ ಚಂದ್ರಶೇಖರ್ ಹೆಬ್ಬಾರ್ ತಿಳಿಸಿದ್ದಾರೆ.

02:0029 Sep 2023

ಬಂದ್‌ಗೆ ಮೈಸೂರಲ್ಲಿ ಬೆಂಬಲ

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಬೆಂಬಲ ವ್ಯಕ್ತವಾಗಿದೆ.

ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದ್ದು, ವಿದ್ಯಾರ್ಥಿಗಳು ಹಾಗೂ ಅವರನ್ನು ಕರೆತರುವ ವಾಹನಗಳ ಓಡಾಟವಿಲ್ಲ. ಅಂಗಡಿಗಳನ್ನು ಮುಚ್ಚಲಾಗಿದೆ.

ರೈತ ಸಂಘ ಹಾಗೂ ಕನ್ನಡಪರ ಸಂಘಟನೆಗಳ ಹೋರಾಟಗಾರರು ಮೈಸೂರಿನ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.

ರೈತ ಸಂಘ ಹಾಗೂ ಕನ್ನಡಪರ ಸಂಘಟನೆಗಳ ಹೋರಾಟಗಾರರು ಮೈಸೂರಿನ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.

02:2029 Sep 2023

ಬಿಗಿ ಪೊಲೀಸ್ ಭದ್ರತೆ

‘ಬಂದ್‌ ಭದ್ರತೆಗಾಗಿ ರಾಜ್ಯದಾದ್ಯಂತ 70 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಕಾವೇರಿ ನದಿ ಕೊಳ್ಳದ ಜಿಲ್ಲೆಗಳಲ್ಲಿ ಭದ್ರತೆಗೆ ಒತ್ತು ನೀಡಲಾಗಿದೆ. ಆಯಾ ಜಿಲ್ಲೆಗಳ ಎಸ್ಪಿಗಳಿಗೆ ಭದ್ರತೆ ಜವಾಬ್ದಾರಿ ವಹಿಸಲಾಗಿದೆ’ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ ತಿಳಿಸಿದ್ದಾರೆ.

‘ಆಯಾ ಜಿಲ್ಲೆಗಳಲ್ಲಿ ಪರಿಸ್ಥಿತಿ ನೋಡಿಕೊಂಡು ನಿಷೇಧಾಜ್ಞೆ ಜಾರಿ ಬಗ್ಗೆ ಜಿಲ್ಲಾಧಿಕಾರಿಗಳು ಕ್ರಮ
ಕೈಗೊಳ್ಳಲಿದ್ದಾರೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಹಾಗೂ ಸಾರ್ವಜನಿಕರ ಹಕ್ಕುಗಳಿಗೆ ಚ್ಯುತಿ ಉಂಟು ಮಾಡಿದರೆ ಕ್ರಮ ಜರುಗಿಸಲಾಗುವುದು’ ಎಂದಿದ್ದಾರೆ.

02:3729 Sep 2023

ಬಿಎಂಟಿಸಿ ಬಸ್, ಮೆಟ್ರೊ ರೈಲು ಎಂದಿನಂತೆ

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಹಾಗೂ ಮೆಟ್ರೊ ರೈಲು ಎಂದಿನಂತೆ ಸಂಚಾರ ನಡೆಸುತ್ತಿದೆ. ಉಳಿದಂತೆ ರಾಜ್ಯದಾದ್ಯಂತ ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚರಿಸುತ್ತಿವೆ.

02:4429 Sep 2023

ಚಾಮರಾಜನಗರದಲ್ಲಿ ಬಂದ್ ಗೆ ಬೆಂಬಲ

ಚಾಮರಾಜನಗರ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕರ್ನಾಟಕ ಬಂದ್ ಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ.

ಬೆಳಿಗ್ಗೆ 6 ಗಂಟೆಯಿಂದಲೇ ಕಾವೇರಿ ಹೋರಾಟ ಕ್ರಿಯಾ ಸಮಿತಿಯವರು ಪ್ರತಿಭಟನೆ ಆರಂಭಿಸಿದ್ದು, ಜಿಲ್ಲಾ ಕೇಂದ್ರದಲ್ಲಿ ಅಲ್ಲಲ್ಲಿ ರಸ್ತೆ ತಡೆ ಮಾಡುತ್ತಿದ್ದಾರೆ.

ಕಾವೇರಿ ಹೋರಾಟ ಕ್ರಿಯಾ ಸಮಿತಿಯವರು ಪ್ರತಿಭಟನೆ ಆರಂಭಿಸಿದ್ದಾರೆ.

ಕಾವೇರಿ ಹೋರಾಟ ಕ್ರಿಯಾ ಸಮಿತಿಯವರು ಪ್ರತಿಭಟನೆ ಆರಂಭಿಸಿದ್ದಾರೆ.

03:1329 Sep 2023

ರಾಮನಗರ: ಖಾಲಿ ಮಡಿಕೆ ಪ್ರದರ್ಶಿಸಿ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು ಎಂದು ಆಗ್ರಹಿಸಿ, ಇಂದು ರಾಜ್ಯದಾದ್ಯಂತ ಕರೆ ಕೊಟ್ಟಿರುವ ಬಂದ್‌ಗೆ ರಾಮನಗರದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಿಗ್ಗೆಯಿಂದಲೇ ಅಂಗಡಿ–ಮುಂಗಟ್ಟುಗಳು ಮುಚ್ಚಿವೆ. ಸರ್ಕಾರಿ ಬಸ್ ಮತ್ತು ಖಾಸಗಿ ವಾಹನಗಳ ಓಡಾಟವೂ ಕಡಿಮೆಯಾಗಿದೆ.