ನವದೆಹಲಿ: ಬಜೆಟ್ ಅಧಿವೇಶನದ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಹುಕ್ಕೇರಿ ಶಾಸಕ ಉಮೇಶ ಕತ್ತಿ ಸೇರಿದಂತೆ ಮೂವರಿಗೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೌರವಾರ್ಥ ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ಸಂಜೆ ಏರ್ಪಡಿಸಿದ್ದ ಔತಣಕೂಟದಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ಪಕ್ಷದಿಂದ ಬಂದಿರುವ 10 ಜನರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ. ಈಗ ಬಿಜೆಪಿಯಲ್ಲಿರುವ ಆಕಾಂಕ್ಷಿಗಳಿಗೆ ಅವಕಾಶ ದೊರೆಯಲಿದೆ ಎಂದರು.

ಅಕ್ಕಿ ಕಡಿತಗೊಳಿಸಿ ಗೋಧಿ:ರಾಜ್ಯ ಬಜೆಟ್ ಮಂಡನೆಗೆ ಎಲ್ಲ ಸಿದ್ಧತೆಗಳೂ ನಡೆದಿವೆ. ‘ಅನ್ನಭಾಗ್ಯ’ ಯೋಜನೆ ಅಡಿ ನೀಡಲಾಗುವ ಅಕ್ಕಿಯಲ್ಲಿ ಎರಡು ಕೆ.ಜಿ. ಕಡಿತಗೊಳಿಸಿ ಗೋಧಿ ವಿತರಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಅವರು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.