ನಂಜನಗೂಡು ಪ್ರಕರಣದ ಬಗ್ಗೆ ಸೂಕ್ತ ತನಿಖೆಗೆ ಹಾಗೂ ಕೆಲವು ಬೇಡಿಕೆಗಳೊಂದಿಗೆ ಪ್ರತಿಭಟನೆಗೆ ಮುಂದಾಗಿದ್ದ ವೈದ್ಯಾಧಿಕಾರಿಗಳು, ಮಾನ್ಯ ಮುಖ್ಯಮಂತ್ರಿ ಶ್ರೀ @BSYBJP ಅವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂಬ ನನ್ನ ಭರವಸೆಗೆ ಬೆಲೆ ಕೊಟ್ಟು ಪ್ರತಿಭಟನೆಯನ್ನು ಹಿಂದಕ್ಕೆ ಪಡೆದಿದ್ದಾರೆ.1/2
2/2 ಇಲಾಖೆಯ ವೈದ್ಯಾಧಿಕಾರಿಗಳ ಸಮಸ್ಯೆಗಳ ಬಗ್ಗೆ ಮುಂದಿನ ವಾರ ಸಭೆ ಕರೆದು ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.
ಕೋವಿಡ್ ವ್ಯಾಪಿಸಿರುವ ಸನ್ನಿವೇಶದಲ್ಲಿ ಜನರ ಆರೈಕೆಗೆ ನಿಮ್ಮೆಲ್ಲರ ಸೇವೆ ಅತ್ಯಗತ್ಯ. ಈ ಜವಾಬ್ದಾರಿ ಅರಿತು, ಸಾರ್ವಜನಿಕ ಹಿತದೃಷ್ಟಿಯಿಂದ ಮುಷ್ಕರ ನಡೆಸುವ ನಿರ್ಧಾರ ಹಿಂಪಡೆದಿರುವ ಎಲ್ಲ ಆರೋಗ್ಯಾಧಿಕಾರಿಗಳಿಗೆ ಧನ್ಯವಾದಗಳು.
ಕೋವಿಡ್ ಸಂದರ್ಭದಲ್ಲಿ ವೈದ್ಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಅರಿವಿದೆ. ಸನ್ಮಾನ್ಯ ಮುಖ್ಯಮಂತ್ರಿ ಶ್ರೀ @BSYBJP ಅವರು ವೈದ್ಯರ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿರುವ ಹಿನ್ನೆಯಲ್ಲಿ, ನೆನ್ನೆ ಕರೆ ನೀಡಲಾಗಿದ್ದ ಮುಷ್ಕರ ವಾಪಸ್ ಪಡೆದಿರುವ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘಕ್ಕೆ ಧನ್ಯವಾದಗಳು.