ಶುಕ್ರವಾರ, 8 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನವರಿಯಲ್ಲಿ ಎನ್‌ಎಫ್‌ಎಚ್‌ಎಸ್‌–6 ಆರೋಗ್ಯ ಸಮೀಕ್ಷೆ

Published 23 ಸೆಪ್ಟೆಂಬರ್ 2023, 0:09 IST
Last Updated 23 ಸೆಪ್ಟೆಂಬರ್ 2023, 0:09 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯು (ಎನ್‌ಎಫ್‌ಎಚ್‌ಎಸ್‌–6) ಮುಂಬರುವ ಜನವರಿಯಿಂದ ಮಾರ್ಚ್‌ ತಿಂಗಳವರೆಗೆ ನಡೆಯಲಿದೆ. 

ಆರೋಗ್ಯ ಇಲಾಖೆಯ ನೇತೃತ್ವದಲ್ಲಿ ಇಲ್ಲಿ ಸಮೀಕ್ಷೆ ನಡೆಯಲಿದ್ದು, ಮುಂಬೈನ ಐಐಪಿಎಸ್ ಹಾಗೂ ಇಲ್ಲಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಅಧ್ಯಯನ ಸಂಸ್ಥೆಯ (ಐಎಸ್‌ಇಸಿ) ಜನಸಂಖ್ಯಾ ಸಂಶೋಧನಾ ಕೇಂದ್ರ ಮಾಹಿತಿ ಕಲೆಹಾಕಲಿವೆ. ಇದೇ ಮೊದಲ ಬಾರಿಗೆ ಕರ್ನಾಟಕವನ್ನು ಉತ್ತರ ಮತ್ತು ದಕ್ಷಿಣವೆಂದು ವಿಂಗಡಿಸಿ, ಸಮೀಕ್ಷೆ ನಡೆಸಲಾಗುತ್ತಿದೆ. ಉತ್ತರ ಭಾಗವನ್ನು ಗೋವಾಕ್ಕೆ ಸೇರ್ಪಡೆ ಮಾಡಲಾಗಿದೆ. ಈಗಾಗಲೇ ಸಮೀಕ್ಷೆಯ ನಕ್ಷೆಯನ್ನು ಸಿದ್ಧಪಡಿಸಿ, ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. 

‘ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ನೀತಿಗಳನ್ನು ರೂಪಿಸಲು ಈ ಸಮೀಕ್ಷೆ ಸಹಕಾರಿಯಾಗಲಿದೆ. ರಾಜ್ಯದಲ್ಲಿ 26,400 ಕುಟುಂಬಗಳು ಸಮೀಕ್ಷೆಗೆ ಒಳಪಡಲಿವೆ. ಈವರೆಗೆ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ 5 ಸುತ್ತುಗಳಲ್ಲಿ ನಡೆದಿದೆ. 6ನೇ ಸುತ್ತಿನ ಸಮೀಕ್ಷೆಯಲ್ಲಿ ಕೋವಿಡ್‌ ಕಾಯಿಲೆ ಪರಿಣಾಮದ ಬಗ್ಗೆಯೂ ಮಾಹಿತಿ ಕಲೆಹಾಕಲಾಗುತ್ತದೆ. ನೀರು, ನೈರ್ಮಲ್ಯ, ಅಡುಗೆ ಎಣ್ಣೆ, ಕೈತೊಳೆಯುವ ವ್ಯವಸ್ಥೆ ಸೇರಿ ಕುಟುಂಬಕ್ಕೆ ಸಂಬಂಧಿಸಿದ ವಿವಿಧ ಮಾಹಿತಿ ಹಾಗೂ ವೈಯಕ್ತಿಕ ಆರೋಗ್ಯ ಮಾಹಿತಿ ಸಂಗ್ರಹಿಸಲಾಗುತ್ತದೆ. ಮೇ ಅಥವಾ ಜೂನ್ ತಿಂಗಳ ವೇಳೆಗೆ ವರದಿ ಸಿದ್ಧವಾಗುತ್ತದೆ’ ಎಂದು ಇಲಾಖೆಯ ಜಂಟಿ ನಿರ್ದೇಶಕಿ ಪ್ರಮೀಳಾ ತಿಳಿಸಿದರು. 

‘ತಾಯಂದಿರ ಹಾಗೂ ಶಿಶು ಮರಣ, ಅಪೌಷ್ಟಿಕತೆ ಮತ್ತು ರಕ್ತ ಹೀನತೆ ತಗ್ಗಿಸಲು ಸಹ ಈ ಸಮೀಕ್ಷೆ ಪೂರಕವಾಗಲಿದೆ. ಈ ಸಮೀಕ್ಷೆಯು ರಾಜ್ಯದ ಜನರ ಆರೋಗ್ಯ ಸ್ಥಿತಿಗತಿಯನ್ನು ಸೂಚಿಸಲಿದೆ. ಆದ್ದರಿಂದ ಜನರು ಅಗತ್ಯ ಮಾಹಿತಿ ಒದಗಿಸಬೇಕು’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT