ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರಿನ ಲಿಂಗಾಂಬುಧಿ ಕೆರೆಯಲ್ಲಿ ಮೀನುಗಳ ಸಾವು: ಜಂಟಿ ಸಮಿತಿ ರಚಿಸಿದ ಎನ್‌ಜಿಟಿ

Published 11 ಸೆಪ್ಟೆಂಬರ್ 2023, 15:33 IST
Last Updated 11 ಸೆಪ್ಟೆಂಬರ್ 2023, 15:33 IST
ಅಕ್ಷರ ಗಾತ್ರ

ನವದೆಹಲಿ: ಮೈಸೂರಿನ ಲಿಂಗಾಂಬುಧಿ ಕೆರೆಯಲ್ಲಿ ಮೀನುಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಪ್ರಕರಣವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪ್ರಧಾನ ಪೀಠ ದಾಖಲಿಸಿಕೊಂಡಿದೆ. 

ಈ ಘಟನೆಯು ಪರಿಸರ ನಿಯಮಗಳು ಮತ್ತು ನಿಗದಿತ ಕಾಯ್ದೆಗಳ ನಿಬಂಧನೆಗಳ ಉಲ್ಲಂಘನೆಯನ್ನು ಸ್ಪಷ್ಟವಾಗಿ ಬಹಿರಂಗಪಡಿಸುತ್ತದೆ ಎಂದು ನ್ಯಾಯಮೂರ್ತಿಗಳಾದ ಪ್ರಕಾಶ್‌ ಶ್ರೀವಾಸ್ತವ, ಸುಧೀರ್ ಅಗರವಾಲ್‌ ಹಾಗೂ ಡಾ.ಸೆಂಥಿಲ್‌ ವೇಲ್ ಅವರನ್ನು ಒಳಗೊಂಡ ಪೀಠ ಹೇಳಿದೆ. 

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿ ಹಾಗೂ ಮೈಸೂರು ಜಿಲ್ಲಾಧಿಕಾರಿ ಅವರನ್ನು ಒಳಗೊಂಡ ಜಂಟಿ ಸಮಿತಿಯನ್ನು ಪೀಠ ರಚಿಸಿದೆ. ಮೈಸೂರು ಜಿಲ್ಲಾಧಿಕಾರಿಯವರು ನೋಡಲ್‌ ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ಸಮಿತಿಯು ಕೆರೆಗೆ ಭೇಟಿ ನೀಡಿ ಪರಿಶೀಲಿಸಿ ಮಾದರಿಗಳನ್ನು ಸಂಗ್ರಹಿಸಬೇಕು. ಮೀನುಗಳ ಸಾವಿಗೆ ಕಾರಣವೇನು ಎಂಬುದನ್ನು ಪತ್ತೆ ಹಚ್ಚಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು. ಜತೆಗೆ, ಆರು ವಾರಗಳೊಳಗೆ ಪೀಠಕ್ಕೆ ವರದಿಯನ್ನು ಸಲ್ಲಿಸಬೇಕು ಎಂದು ಪೀಠ ನಿರ್ದೇಶನ ನೀಡಿದೆ. 

ಈ ಘಟನೆಯು ನ್ಯಾಯಮಂಡಳಿಯ ಚೆನ್ನೈ ಪೀಠದ ವ್ಯಾಪ್ತಿಯಲ್ಲಿ ನಡೆದಿದೆ. ಹೀಗಾಗಿ, ಈ ಪ್ರಕರಣದ ವಿಚಾರಣೆಯನ್ನು ಚೆನ್ನೈ ಪೀಠ ನಡೆಸಲಿದೆ ಎಂದು ಪ್ರಧಾನ ಪೀಠ ತಿಳಿಸಿದೆ. ವಿಚಾರಣೆಯನ್ನು ಡಿಸೆಂಬರ್ 1ಕ್ಕೆ ಮುಂದೂಡಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT