ಮೈಸೂರು: ‘ಗುಂಬಜ್’ ಮಾದರಿಯ ವಿನ್ಯಾಸದಿಂದ ವಿವಾದಕ್ಕೆ ಕಾರಣವಾಗಿರುವ ಇಲ್ಲಿನ ಊಟಿ ರಸ್ತೆಯ ಜೆಎಸ್‌ಎಸ್ ಕಾಲೇಜು ಬಳಿಯ ಬಸ್ ನಿಲ್ದಾಣವನ್ನು ಏಳು ದಿನದೊಳಗೆ ತೆರವುಗೊಳಿಸಬೇಕು’ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಕೆಆರ್‌ಐಡಿಎಲ್ ಕಾರ್ಯನಿರ್ವಾಹಕ ಎಂಜಿನಿಯರ್‌ಗೆ ನ.15ರಂದು ನೋಟಿಸ್ ಜಾರಿಗೊಳಿಸಿದೆ.

‘ಇದನ್ನು ಅಕ್ರಮವಾಗಿ ನಿರ್ಮಿಸಲಾಗಿದೆ’ ಎಂದು ಹೇಳಿದೆ.

‘ಹೆದ್ದಾರಿಯಲ್ಲಿ ನಿರ್ಮಿಸುತ್ತಿರುವ ನಿಲ್ದಾಣದ ಕಾಮಗಾರಿ ಸ್ಥಗಿತಗೊಳಿಸುವಂತೆ ಎನ್‌ಎಚ್‌ಎಐ ಎಂಜಿನಿಯರ್‌ಗಳು ಈ ಹಿಂದೆ ಹಲವು ಬಾರಿ ಸೂಚಿಸಿದ್ದರು. ಆದರೂ ನಿರ್ಮಿಸಲಾಗಿದೆ. ಈಗ ಈ ನಿಲ್ದಾಣದ ವಿನ್ಯಾಸದ ವಿಚಾರ ಧಾರ್ಮಿಕ ವಿವಾದದ ಸ್ವರೂಪ ಪಡೆದುಕೊಂಡಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಎನ್‌ಎಚ್‌ಎಐ ಕಾಯ್ದೆ ಅನ್ವಯ ಈ ನೋಟಿಸ್ ಜಾರಿಗೊಳಿಸಲಾಗಿದೆ’ ಎಂದು ತಿಳಿಸಲಾಗಿದೆ.

‘ಹೆದ್ದಾರಿಗೆ ಸೇರಿದ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿ, ನಿಲ್ದಾಣ ನಿರ್ಮಿಸಿರುವುದು ಸ್ಥಳ ಪರಿಶೀಲನೆ ವೇಳೆ ಕಂಡುಬಂದಿದೆ. ಆದ್ದರಿಂದ, ನೋಟಿಸ್ ಜಾರಿಯಾದ ಏಳು ದಿನಗಳಲ್ಲಿ ಕಟ್ಟಡವನ್ನು ತೆರವುಗೊಳಿಸಬೇಕು. 3 ದಿನದಲ್ಲಿ ವಿವರಣೆ ನೀಡಬೇಕು’ ಎಂದು ಎನ್‌ಎಚ್‌ಎಐನ ರಾಮನಗರ ವಿಭಾಗದ ಯೋಜನಾ ನಿರ್ದೇಶಕರು ನೋಟಿಸ್‌ನಲ್ಲಿ ತಿಳಿಸಿದ್ದಾರೆ.

‘ಒಂದು ವೇಳೆ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳದಿದ್ದರೆ, ಎನ್‌ಎಚ್‌ಎಐ ಕಾಯ್ದೆಯಡಿ ದಂಡ ವಿಧಿಸಲಾಗುವುದು’ ಎಂದು ಎಚ್ಚರಿಕೆ ನೀಡಲಾಗಿದೆ.

ಕಾಂಗ್ರೆಸ್ ಟೀಕೆ:

ಬಸ್ ನಿಲ್ದಾಣದ ವಿಚಾರದಲ್ಲಿ ಶಾಸಕ ಎಸ್.ಎ.ರಾಮದಾಸ್–ಸಂಸದ ಪ್ರತಾಪ ಸಿಂಹ ನಡುವೆ ನಡೆದಿರುವ ಶೀತಲ ಸಮರವನ್ನು ಕಾಂಗ್ರೆಸ್ಸರಣಿ ಟ್ವೀಟ್‌ಗಳ ಮೂಲಕ ಟೀಕಿಸಿದೆ.

‘ಪ್ರಜಾವಾಣಿ’ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದು, ‘ಬಿಜೆಪಿ ವರ್ಸ್‌ಸ್ ಬಿಜೆಪಿ ಕಿಚ್ಚು ಎಷ್ಟಿದೆ ಎನ್ನಲು ಪ್ರತಾಪ ಹಾಗೂ ರಾಮದಾಸ್ ನಡುವಿನ ಕಾಳಗವೇ ಸಾಕ್ಷಿ. ಶಾಸಕರು ಕಟ್ಟಿದ ನಿಲ್ದಾಣವನ್ನು ಸಂಸದ ಒಡೆಯಲು ಹೊರಟಿದ್ದಾರೆ’ ಎಂದು ವ್ಯಂಗ್ಯವಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.