ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನಾಲ್ವರು ಆರೋಪಿಗಳ ವಿರುದ್ಧ ಸೋಮವಾರ ಬೆಂಗಳೂರಿನ ವಿಶೇಷ ಎನ್‌ಐಎ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.
ಆರೋಪಿಗಳಾದ ಮುಸಾವೀರ್ ಹುಸೇನ್ ಶಾಜೀಬ್ , ಅಬ್ದುಲ್ ಮಥೀನ್ ಅಹಮದ್ ತಾಹಾ, ಮಾಜ್ ಮುನೀರ್ ಅಹ್ಮದ್ ಮತ್ತು ಮುಝಮ್ಮಿಲ್ ಷರೀಫ್ ವಿರುದ್ಧ ಭಾರತೀಯ ದಂಡ ಸಂಹಿತೆ, ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿದೆ.