ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಬಾಂಬರ್‌ನ ಭಾವಚಿತ್ರಗಳನ್ನು ಬಿಡುಗಡೆ ಮಾಡಿದ NIA

Published 9 ಮಾರ್ಚ್ 2024, 10:31 IST
Last Updated 9 ಮಾರ್ಚ್ 2024, 10:31 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ‘ದಿ ರಾಮೇಶ್ವರಂ ಕೆಫೆ’ಯಲ್ಲಿ ನಡೆದಿದ್ದ ಬಾಂಬ್‌ ಸ್ಫೋಟ ಪ್ರಕರಣದ ತನಿಖೆ ಆರಂಭಿಸಿರುವ ರಾಷ್ಟ್ರೀಯ ತನಿಖಾ ದಳವು (ಎನ್‌ಐಎ) ಶಂಕಿತ ಆರೋಪಿಯ ಭಾವಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದೆ.

ಸಿ.ಸಿ.ಟಿ.ವಿ. ಕ್ಯಾಮೆರಾದ ದೃಶ್ಯಾವಳಿ ಆಧಾರದಲ್ಲಿ ಆರೋಪಿಯ ಭಾವಚಿತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಟಿ–ಶರ್ಟ್‌, ಜೀನ್ಸ್ ಪ್ಯಾಂಟ್‌ ಧರಿಸಿರುವ ಆರೋಪಿಯು ತಲೆಗೆ ಕ್ಯಾಪ್ ಹಾಗೂ ಮುಖಕ್ಕೆ ಮಾಸ್ಕ್ ಹಾಕಿರುವುದನ್ನು ಕಾಣಬಹುದಾಗಿದೆ.

ಈ ಕುರಿತು ಸಾರ್ವಜನಿಕ ಪ್ರಕಟಣೆ ಹೊರಡಿಸಿರುವ ಎನ್‌ಐಎ, ಮಾಹಿತಿ ನೀಡಿದವರ ಹೆಸರನ್ನು ಗೋಪ್ಯವಾಗಿ ಇಡಲಾಗುವುದು ಎಂದು ತಿಳಿಸಿದೆ.

ಶಂಕಿತನ ಸುಳಿವು ಲಭಿಸಿದ ಕೂಡಲೇ 080 29510900, 8904241100 ಹಾಗೂ ಇ–ಮೇಲ್‌ ವಿಳಾಸ info.blr.nia@gov.inಗೆ ಮಾಹಿತಿ ನೀಡಬಹುದು ‌ಎಂದು ಅಧಿಕಾರಿಗಳು ಕೋರಿದ್ದಾರೆ.

ಶಂಕಿತ ಆರೋಪಿಯು ಬಿಎಂಟಿಸಿ ಬಸ್‌ನಲ್ಲಿ ಓಡಾಟ ನಡೆಸಿರುವ ಎರಡು ವಿಡಿಯೊಗಳನ್ನು ಶುಕ್ರವಾರ ಎನ್‌ಐಎ ಬಿಡುಗಡೆ ಮಾಡಿತ್ತು.

ಬಸ್‌ನಲ್ಲಿ ಅಳವಡಿಸಿದ್ದ ಸಿ.ಸಿ.ಟಿ.ವಿ. ಕ್ಯಾಮೆರಾದ ದೃಶ್ಯಾವಳಿ ಆಧಾರದಲ್ಲಿ ಆರೋಪಿಯ ವಿಡಿಯೊ ಬಿಡುಗಡೆ ಮಾಡಲಾಗಿತ್ತು. ಆರೋಪಿಯು ಬಸ್‌ನಲ್ಲಿ ಕುರಿತು ಪ್ರಯಾಣಿಸುತ್ತಿರುವ ದೃಶ್ಯ ಸೆರೆಯಾಗಿತ್ತು.

ಇತ್ತೀಚೆಗೆ ‌ಶಂಕಿತ ಆರೋಪಿ ಫೋಟೊವನ್ನು ಬಿಡುಗಡೆ ಮಾಡಿದ್ದ ಎನ್‌ಐಎ, ಸುಳಿವು ನೀಡಿದವರಿಗೆ ₹10 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT