ಬೆಂಗಳೂರು: ಲೋಕಸಭೆ ಸದಸ್ಯರಾಗಿ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದ ಸೋದರ ಪ್ರಜ್ವಲ್ ರೇವಣ್ಣ ಅವರಿಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಶನಿವಾರ ಶುಭ ಕೋರಿದ್ದಾರೆ.

ತಮ್ಮ ಅಧಿಕೃತ ಫೇಸ್ಬುಕ್ ಖಾತೆ ಮೂಲಕ ಅವರುಶುಭ ಸಂದೇಶ ಹಂಚಿಕೊಂಡಿದ್ದಾರೆ.

‘ಹಾಸನ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿ ಸಂಸತ್ತಿನಲ್ಲಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕಾರ ಮಾಡಿದ ಆತ್ಮೀಯ ಸಹೋದರ ಪ್ರಜ್ವಲ್ ರೇವಣ್ಣನವರಿಗೆ ಶುಭ ಕೋರುತ್ತೇನೆ. ನೆಲ, ಜಲ, ಭಾಷೆ, ರೈಲ್ವೆ ಯೋಜನೆ ಹಾಗೂ ನಮ್ಮ ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಕುರಿತು ಸಂಸತ್ತಿನಲ್ಲಿ ಸಮರ್ಥವಾಗಿ ಧ್ವನಿ ಎತ್ತುವ ಮೂಲಕ ಪ್ರಾದೇಶಿಕ ಹಿತಾಸಕ್ತಿಯನ್ನು ರಕ್ಷಿಸುವ ಪ್ರಜಾಸತ್ತಾತ್ಮಕ ಹೋರಾಟ ನಡೆಸಲಿದ್ದಾರೆ ಎನ್ನುವ ನಂಬಿಕೆ ನನ್ನದು,’ ಎಂದು ಅವರು ಬರೆದಿದ್ದಾರೆ.

ಹಾಸನ ಲೋಕಸಭೆ ಕ್ಷೇತ್ರದಿಂದ ಚುನಾಯಿತರಾಗಿರುವ ಪ್ರಜ್ವಲ್ ರೇವಣ್ಣ ಅವರು, ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.