ಬೆಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ ನಿಫಾ ವೈರಾಣು ಕಾಣಿಸಿಕೊಂಡಿರುವುದರಿಂದ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು ಹಾಗೂ ಚಾಮರಾಜನಗರದಲ್ಲಿಕಟ್ಟೆಚ್ಚರ ವಹಿಸಿ, ಅಲ್ಲಿಂದ ಬರುವವರಿಗೆ ತಪಾಸಣೆ ನಡೆಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.

ಈ ಬಗ್ಗೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಸುತ್ತೋಲೆ ಹೊರಡಿಸಿದ್ದಾರೆ. ‘ಈ ವೈರಾಣು 2018ರಲ್ಲಿ ಕೇರಳದಲ್ಲಿ ಕಾಣಿಸಿಕೊಂಡಿತ್ತು. ದೃಢ ಪ್ರಕರಣ ಹಾಗೂ ಮರಣ ಪ್ರಕರಣವೂ ವರದಿಯಾಗಿದ್ದವು. ಈ ರೋಗವು ಶೇ 40ರಿಂದ ಶೇ 75ರವರೆಗೆ ಮರಣ ಪ್ರಮಾಣವನ್ನು ಹೊಂದಿದೆ. ಹಾಗಾಗಿ, ಈ ಪ್ರಕರಣ ಕೇರಳದಲ್ಲಿ ವರದಿಯಾಗಿರುವುದರಿಂದ ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ಅದರಲ್ಲೂ ಕೇರಳಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಗಳಲ್ಲಿ ವಿಶೇಷ ನಿಗಾ ಇಡಬೇಕು’ ಎಂದು ತಿಳಿಸಿದ್ದಾರೆ.

‘ಕೇರಳದಿಂದ ಇಲ್ಲಿಗೆ ಬರುವವರು ರೋಗ ಲಕ್ಷಣಗಳನ್ನು ಹೊಂದಿದ್ದಾರೆಯೇ ಎನ್ನುವುದನ್ನು ಪರಿಶೀಲಿಸಿ, ಶಂಕಿತರನ್ನು ಗುರುತಿಸಬೇಕು. ಅಂಥವರ ಮಾದರಿಗಳನ್ನು ಸಂಗ್ರಹಿಸಿ, ಪುಣೆಯ ವೈರಾಣು
ವಿಜ್ಞಾನ ಸಂಸ್ಥೆಗೆ (ಎನ್‌ಐವಿ) ಕಳುಹಿಸಬೇಕು. ಸದ್ಯ ಈ ಸೋಂಕಿಗೆ ಚಿಕಿತ್ಸೆಯಿಲ್ಲ. ಆದರೆ, ಪೂರಕ ಚಿಕಿತ್ಸೆ ನೀಡುವ ಮೂಲಕ ಮರಣ ಪ್ರಮಾಣವನ್ನು ತಗ್ಗಿಸಲು ಸಾಧ್ಯ’ ಎಂದು ಹೇಳಿದ್ದಾರೆ.

ನಿಫಾ ಲಕ್ಷಣಗಳಿದ್ದರೆ 104ಕ್ಕೆ ಕರೆ ಮಾಡಿ

‘ಜ್ವರ, ಮೈಕೈ ನೋವು, ತಲೆನೋವು, ನಡುಕ, ವಾಂತಿ, ನಿದ್ರಾಲಸ್ಯ, ತೊದಲುವಿಕೆ ಹಾಗೂ ಪ್ರಜ್ಞಾಹೀನತೆ ನಿಫಾ ಜ್ವರದ ಲಕ್ಷಣಗಳಾಗಿವೆ. ಜ್ವರದ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಬೇಕು. ನೆರವಿಗೆ ಉಚಿತ ಸಹಾಯವಾಣಿ 104ಕ್ಕೆ ಕರೆ ಮಾಡಿ’ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.