ನಿಪ್ಪಾಣಿ: ‘ನಿಗಮದಿಂದ ನಿವೇಶನ ರಹಿತ ಅಲೆಮಾರಿ ಸಮುದಾಯದವರಿಗೆ ₹2 ಲಕ್ಷ ಸಹಾಯ ಧನ ನೀಡಲಾಗುತ್ತಿದ್ದು, ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ . ಹೇಳಿದರು.

ಸ್ಥಳೀಯ ಪ್ರವಾಸಿ ಮಂದಿರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಲೆಮಾರಿ ಸಮುದಾಯದ ಅಭಿವೃದ್ಧಿಗಾಗಿ ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ₹100 ಕೋಟಿ ವಿಶೇಷ ಅನುದಾನ ನಿಗದಿ ಮಾಡಿದ್ದಾರೆ. ಶಿಕ್ಷಣದಿಂದ ವಂಚಿತರಾಗಿದ್ದ ಅಲೆಮಾರಿ ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಎಂಟು ಅಲೆಮಾರಿ ವಸತಿ ಸಹಿತ ಶಾಲೆಗಳ ಅನುಮೋದನೆಗೆ ಪ್ರಸ್ತಾಪಿಸಿದ್ದೆ. ಬಜೆಟ್ನಲ್ಲಿ ನಾಲ್ಕು ಶಾಲೆಗಳನ್ನು ಸರ್ಕಾರ ಅನುಮೋದಿಸಿದೆ’ ಎಂದರು.

‘ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ಅಲೆಮಾರಿ ಸಮುದಾಯದ ಅಭಿವೃದ್ಧಿಗಾಗಿ ತಮ್ಮ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ’ ಎಂದರು.

‘ಪ್ರತಿ ಗ್ರಾಮ ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ವಾಸ ಮಾಡುತ್ತಿರುವ ಅಲೆಮಾರಿ ಸಮುದಾಯದ ಕುಂದುಕೊರತೆ ಆಲಿಸಲು ಮತ್ತು ಜಾಗೃತಿ ಮೂಡಿಸಲು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಕುಂದುಕೊರತೆ ಸಭೆ ನಡೆಸಬೇಕು ಎಂದು ನಿರ್ದೇಶಿಸಲಾಗಿದೆ. ಅಧಿಕಾರಿಗಳು ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿ ತೋರದೆ ಸರ್ಕಾರದ ಸೌಲತ್ತುಗಳು ದೊರಕಿಸಿ ಕೊಡಲು ಪ್ರಯತ್ನಿಸಬೇಕು’ ಎಂದು ತಿಳಿಸಿದರು.

ನಿಗಮ ಮಂಡಳದ ವಿಶೇಷ ಅಧಿಕಾರಿ ಶಶಿಧರ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸ್ಥಳೀಯ ಸಹಾಯಕ ನಿರ್ದೇಶಕಿ ಅರ್ಚನಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-21-1840930033

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.