ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ ಮಾದರಿಯನ್ನು ಕರ್ನಾಟಕ ಸರ್ಕಾರವು ಈಗಾಗಲೇ ರೂಪಿಸಿದ್ದು, ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತಂದಿದೆ.
– ಸಿದ್ದರಾಮಯ್ಯ, ಮುಖ್ಯಮಂತ್ರಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರವನ್ನು ನಿಂದಿಸುತ್ತಾ ಕೂತರೆ ಪ್ರಯೋಜನವಿಲ್ಲ. ಹದಿನಾಲ್ಕು ಬಜೆಟ್ ಮಂಡಿಸಿದ ಅವರು ನೀತಿ ಆಯೋಗದ ಸಭೆಗೆ ಗೈರು ಆಗುವುದು ಎಷ್ಟು ಸರಿ? ರಾಜಕೀಯ ಪ್ರತಿಷ್ಠೆಗೆ ರಾಜ್ಯದ ಹಿತವನ್ನು ಬಲಿಕೊಡುವುದು ತಪ್ಪು. ಸಂವಾದವೇ ಇಲ್ಲದಿದ್ದರೆ ಸಮಸ್ಯೆ ಹೇಗೆ ಬಗೆಹರಿಯುತ್ತದೆ. ರಾಷ್ಟ್ರದ ನೀತಿ ನಿರೂಪಣೆ, ಅಭಿವೃದ್ಧಿಗೆ ಸಂಬಂಧಿಸಿ ಪ್ರಧಾನಿ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಅವರು ತಪ್ಪದೇ ಭಾಗವಹಿಸಬೇಕಿತ್ತು. ಮುಂದಾದರೂ ರಾಜ್ಯದ ಹಿತದೃಷ್ಟಿಯಿಂದ ಮುಖ್ಯಮಂತ್ರಿಯವರು ಇಂತಹ ಸಭೆಯಲ್ಲಿ ತಪ್ಪದೇ ಭಾಗವಹಿಸಬೇಕು ಎಂಬುದು ನನ್ನ ಸಲಹೆ. ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಬೇಡ.