ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಬರ ಪರಿಹಾರದ ಹಣವನ್ನು ಬ್ಯಾಂಕ್‌ ಪಡೆಯುವಂತಿಲ್ಲ: ಸಚಿವ ಶಿವಾನಂದ ಪಾಟೀಲ

Published 18 ಮೇ 2024, 2:51 IST
Last Updated 18 ಮೇ 2024, 2:51 IST
ಅಕ್ಷರ ಗಾತ್ರ

ಬೆಂಗಳೂರು: ಬರ ಪರಹಾರದ ಭಾಗವಾಗಿ ರೈತರ ಖಾತೆಗಳಿಗೆ ಪಾವತಿಸಿರುವ ನೆರವಿನ ಮೊತ್ತವನ್ನು ಬ್ಯಾಂಕ್‌ಗಳು ಸಾಲದ ಬಾಬ್ತು ಜಮೆ ಮಾಡಿಕೊಳ್ಳುವಂತಿಲ್ಲ ಎಂದು ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಶನಿವಾರ ನಡೆದ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬರ ಪರಿಹಾರದ ಮೊತ್ತವನ್ನು ಸಾಲದ ಬಾಕಿಗೆ ಹೊಂದಾಣಿಕೆ ಮಾಡಿಕೊಳ್ಳದಂತೆ ಬ್ಯಾಂಕ್‌ಗಳಿಗೆ ರಾಜ್ಯ ಸರ್ಕಾರ ಹಿಂದೆಯೇ ನಿರ್ದೇಶನ ನೀಡಿದೆ. ಯಾವುದಾದರೂ ಬ್ಯಾಂಕ್‌ಗಳು ಆ ರೀತಿಯ ತಪ್ಪು ಮಾಡಿದ್ದರೆ, ಸರಿಪಡಿಸಬೇಕಾಗುತ್ತದೆ’ ಎಂದರು.

ಸಭೆಯಲ್ಲಿ ಮುಖ್ಯಮಂತ್ರಿಯವರು ಕೂಡ ಈ ವಿಷಯ ಪ್ರಸ್ತಾಪಿಸಿದರು. ರೈತರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT