ಬೆಂಗಳೂರು: 'ಬಳ್ಳಾರಿ ಘಟನೆಯ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ಪ್ರಕರಣವನ್ನು ತನಿಖೆ ಮಾಡುವ ಸಾಮಾರ್ಥ್ಯ ನಮ್ಮ ಪೊಲೀಸರಿಗಿದೆ' ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.
.ಬಳ್ಳಾರಿ ಗಲಭೆ; ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಎಲ್.ಕೃಷ್ಣನಾಯ್ಕ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪೊಲೀಸರಿಗೆ ತನಿಖೆ ಮಾಡಲು ಆಗುವುದಿಲ್ಲ ಎಂಬ ಸಂದರ್ಭ ಬಂದರೆ ಸಿಬಿಐಗೆ ನೀಡುವ ಬಗ್ಗೆ ಮಾತನಾಡಬಹುದು. ಈಗಾಗಲೇ ಯಾವುದೇ ಪ್ರಕರಣಗಳನ್ನು ಸಿಬಿಐಗೆ ನೀಡುವುದಿಲ್ಲ ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ' ಎಂದರು.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, 'ಕುಮಾರಸ್ವಾಮಿ ಅವರು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿ ಆಗಿದ್ದವರು. ಕೇಂದ್ರದಲ್ಲಿ ಬೃಹತ್ ಕೈಗಾರಿಕೆ ಸಚಿವರಾಗಿದ್ದಾರೆ. ನನ್ನ ಬಗ್ಗೆ ವೈಯಕ್ತಿಕವಾಗಿ ಹೇಳಿಕೆ ಕೊಟ್ಟಿದ್ದಾರೆ. ನಾನು ಅವರ ಬಗ್ಗೆ ನಾನು ಏನು ಬೇಕಾದರೂ ಮಾತನಾಡಬಹುದು. ಅವರು ಬಹಳ ಜವಾಬ್ದಾರಿಯುತವಾಗಿ ಹೇಳಿಕೆ ಕೊಟ್ಟಿದ್ದಾರೆ ಎಂದು ಭಾವಿಸುತ್ತೇನೆ. ಅದನ್ನು ಸ್ವೀಕಾರ ಮಾಡುತ್ತೇನೆ' ಎಂದರು.
.ಬಳ್ಳಾರಿ ವಲಯದ ಐಜಿಪಿ ವರ್ಗಾಯಿಸಿದ್ದು ಸಿಎಂ, ನಾನಲ್ಲ: ಸಚಿವ ಜಿ.ಪರಮೇಶ್ವರ.
'ರಾಜ್ಯದಲ್ಲಿ ಕಾನೂನು ವ್ಯವಸ್ಥೆಯನ್ನು ಯಾವ ರೀತಿ ಆಡಳಿತ ಮಾಡಬೇಕು ಎಂಬ ಅರಿವು ನನಗಿದೆ ಎಂದು ಅವರಿಗೆ ಹೇಳಬಯಸುತ್ತೇನೆ. 38 ವರ್ಷ ರಾಜಕಾರಣದಲ್ಲಿದ್ದೇನೆ. ಅನೇಕ ಹುದ್ದೆಗಳಲ್ಲಿ ಕೆಲಸ ಮಾಡಿದ್ದೇನೆ. ಕುಮಾರಸ್ವಾಮಿಯವರ ಜೊತೆಗೂ ಕೆಲಸ ಮಾಡಿದ್ದೇನೆ. ಹಾಗಾಗಿ ನನ್ನ ಸಾಮಾರ್ಥ್ಯ ಮತ್ತು ವ್ಯಕ್ತಿತ್ವನೂ ಅವರಿಗೆ ಗೊತ್ತಿದೆ. ಅವರ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ' ಎಂದು ಹೇಳಿದರು.

'ಹುಬ್ಬಳ್ಳಿ ಘಟನೆಯ ಬಗ್ಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿಕೆ ನೀಡಿದ್ದಾರೆ. ನಾವು ಮಹಿಳೆಯನ್ನು ವಿವಸ್ತ್ರಗೊಳಿಸಿಲ್ಲ. ಅರೆಸ್ಟ್ ಮಾಡುವ ಸಂದರ್ಭದಲ್ಲಿ ಮಹಿಳೆಯೇ ಆ ರೀತಿ ಮಾಡಿಕೊಂಡಿದ್ದಾರೆ ಎನ್ನುವ ಸ್ಪಷ್ಟನೆಯನ್ನು ಕಮಿಷನರ್ ನೀಡಿದ್ದಾರೆ. ಕಮಿಷನರ್ ಸ್ಪಷ್ಟಪಡಿಸಿದ ಮೇಲೆ ಅದಕ್ಕಿಂತ ಇನ್ನೇನು ಬೇಕಾಗಿದೆ' ಎಂದರು.
.ಸಂಪಾದಕೀಯ: ಮತ್ತೆ ಬಳ್ಳಾರಿ ರಿಪಬ್ಲಿಕ್ ನೆನಪು– ಬಂದೂಕು ಸಂಸ್ಕೃತಿ ತಲೆ ಎತ್ತದಿರಲಿ.
'ಎಲ್ಲದರಲ್ಲೂ ರಾಜಕೀಯ ಮಾಡುವುದು ಒಳ್ಳೆಯದಲ್ಲ. ಹೆಣ್ಣುಮಗಳ ವಿಚಾರವನ್ನು ಕೈಗೆತ್ತಿಕೊಂಡು ರಾಜಕೀಯ ಮಾಡುವುದು ಸರಿ ಕಾಣುವುದಿಲ್ಲ' ಎಂದು ಹೇಳಿದರು.

ಯಾವ ಪಕ್ಷದವನ್ನು ಅವರ ರಾಜಕೀಯ ಪಕ್ಷದ ಕಾರಣಕ್ಕೆ ಗುರಿ ಮಾಡುವುದಿಲ್ಲ. ಪೊಲೀಸರು ಆ ರೀತಿ ಕೆಲಸ ಮಾಡಲು ಸಾಧ್ಯವಿಲ್ಲ, ಮಾಡಕೂಡದು. ಇದಕ್ಕೆ ಯಾವುದೇ ಅವಕಾಶಗಳನ್ನು ಕೊಡುವುದಿಲ್ಲ. ಯಾವುದೇ ರಾಜಕೀಯ ದುರುದ್ದೇಶದಿಂದ ಪೊಲೀಸರು ನಡೆದುಕೊಳ್ಳುವುದಿಲ್ಲ' ಎಂದು ಸ್ಪಷ್ಟಪಡಿಸಿದರು.

'ಅಕ್ರಮ ಬಾಂಗ್ಲಾ ವಲಿಸಗರನ್ನು ಹಿಡಿದು, ಗಡಿಪಾರು ಮಾಡಲಾಗುತ್ತಿದೆ. ಈಗಾಗಲೇ ಸಾಕಷ್ಟು ಪ್ರಕರಣಗಳನ್ನು ಮಾಡಿದ್ದೇವೆ. ಬಾಂಗ್ಲಾ ದೇಶದವರು ರಾಜ್ಯದಲ್ಲಿ ಅನಧಿಕೃತವಾಗಿ ಎಲ್ಲಿಯೇ ಇದ್ದರು ಪತ್ತೆ ಹಚ್ಚಿ, ಗಡಿಪಾರು ಮಾಡುತ್ತೇವೆ' ಎಂದು ತಿಳಿಸಿದರು.
.ಬಳ್ಳಾರಿ ಘರ್ಷಣೆ | ರಾಜಶೇಖರ್ ಮರಣೋತ್ತರ ಪರೀಕ್ಷೆ 2 ಬಾರಿ ನಡೆಸಿಲ್ಲ: ಪರಮೇಶ್ವರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.