ಬೆಂಗಳೂರು: ‘ನಾನು ಲಂಚ ಪಡೆಯುವುದಿಲ್ಲ ಮತ್ತು ನೀಡುವುದೂ ಇಲ್ಲ. ಜೀವನದ ಎಲ್ಲ ಕ್ಷೇತ್ರಗಳಲ್ಲಿ ಪ್ರಾಮಾಣಿಕತೆ ಮತ್ತು ಕಾನೂನಿನ ನಿಯಮಗಳು ಅನುಸರಿಸುತ್ತೇನೆ’ ಎಂದು ವಿಧಾನಸಭೆಯ ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರತಿಜ್ಞೆ ಸ್ವೀಕರಿಸಿದರು.

ವಿಧಾನಸೌಧದಲ್ಲಿ ಮಂಗಳವಾರ ನಡೆದ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸುವ ‘ಜಾಗೃತಿ ಅರಿವು’ ಕಾರ್ಯಕ್ರಮದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸಚಿವಾಲಯ ಸಿಬ್ಬಂದಿಗೆ ಪ್ರತಿಜ್ಞೆ ಬೋಧಿಸಿದರು.

ಅಧಿಕಾರಿಗಳ ಪ್ರತಿಜ್ಞೆ: ‘ನಮ್ಮ ದೇಶದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಭ್ರಷ್ಟಾಚಾರವು ಒಂದು ಅಡಚಣೆಯಾಗಿದೆ ಎಂದು ನಾನು ನಂಬುತ್ತೇನೆ. ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಸರ್ಕಾರ, ಖಾಸಗಿ ವಲಯದಂತಹ ಎಲ್ಲಾ ಪಾಲುದಾರರು ಒಟ್ಟಾಗಿ ಕೆಲಸ ಮಾಡಬೇಕಾಗುತ್ತದೆ ಎಂದು ನಾನು ನಂಬುತ್ತೇನೆ’.

‘ಎಲ್ಲಾ ಕಾರ್ಯಗಳು ಪ್ರಾಮಾಣಿಕ ಮತ್ತು ಪಾರದರ್ಶಕವಾಗಿ ಹಾಗೂ ಸಾರ್ವಜನಿಕ ಹಿತಾಸಕ್ತಿಯಲ್ಲಿ ನಿರ್ವಹಿಸುತ್ತೇನೆ. ಯಾವುದೇ ಭ್ರಷ್ಟಾಚಾರದ ಘಟನೆಯನ್ನು ಸೂಕ್ತ ಸಂಸ್ಥೆಗೆ ವರದಿ ಮಾಡುತ್ತೇನೆ’.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.