ದಾವಣಗೆರೆ: ‘ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಮಾಡುವ ಯಾವುದೇ ಪ್ರಸ್ತಾವ ಇಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದ್ದಾರೆ.

ಖಾಸಗಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಸೋಮವಾರ ನಗರಕ್ಕೆ ಬಂದಿದ್ದ ಅವರು ಸುದ್ದಿಗಾರರ ಜತೆಗೆ ಮಾತನಾಡಿದರು.

‘ಜನರು ಆತಂಕ ಪಡುವ ಅಗತ್ಯವಿಲ್ಲ. ಲಾಕ್ಡೌನ್ ಜಾರಿಗೊಳಿಸುವುದಿಲ್ಲ. ಶಾಲಾ–ಕಾಲೇಜುಗಳಿಗೆ ರಜೆ ನೀಡುವ ಅಗತ್ಯವಿಲ್ಲ. ಆದರೆ, ನಿಗಾ ಇರಿಸಲಾಗುವುದು’ ಎಂದು ತಿಳಿಸಿದರು.

‘ಓಮೈಕ್ರಾನ್ ಸೋಂಕು ಕುರಿತಂತೆ ರಾಜ್ಯ ಸರ್ಕಾರ ತುರ್ತು ಕ್ರಮಕೈಗೊಳ್ಳುತ್ತಿದೆ. ವಿದೇಶಗಳಿಂದ ಬಂದವರನ್ನು ಪರೀಕ್ಷೆಗೆ ಒಳ
ಪಡಿಸಲಾಗಿದೆ. ದಕ್ಷಿಣ ಆಫ್ರಿಕಾದಿಂದ ಬಂದ ಒಬ್ಬರಲ್ಲಿ ವಿಭಿನ್ನ ಸೋಂಕಿನ ಲಕ್ಷಣ ಕಂಡುಬಂದಿದೆ. ಮಾದರಿಯನ್ನು ಐಸಿಎಂಆರ್ಗೆ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿಗಾಗಿ ಕಾಯುತ್ತಿದ್ದೇವೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.