ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಳೆಯ ಪಿಂಚಣಿ ಯೋಜನೆ ಜಾರಿ ಇಲ್ಲ: ಪಾಲಿಕೆ ನೌಕರರ ಸಂಘ ಖಂಡನೆ

Published 16 ಫೆಬ್ರುವರಿ 2024, 23:49 IST
Last Updated 16 ಫೆಬ್ರುವರಿ 2024, 23:49 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಬಜೆಟ್‌ನಲ್ಲಿ 7ನೇ ವೇತನ ಜಾರಿ ಮತ್ತು ಹಳೆಯ ಪಿಂಚಣಿ ಯೋಜನೆ ಜಾರಿಯನ್ನು ಪ್ರಕಟಿಸದ ವಿರುದ್ಧ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ಆಕ್ರೋಶ ವ್ಯಕ್ತಪಡಿಸಿದೆ.

ಸಂಘದ ರಾಜ್ಯ ಘಟಕದ ಅಧ್ಯಕ್ಷ ಎ.ಅಮೃತ್ ರಾಜ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘2024-25ನೇ ಸಾಲಿನ ಆಯವ್ಯಯದಲ್ಲಿ ಸರ್ಕಾರಿ ನೌಕರರು, ಪಾಲಿಕೆ ನೌಕರರು ಮತ್ತು ಸ್ಥಳೀಯ ಸಂಸ್ಥೆ, ನಗರ ಸಭೆ/ಪುರಸಭೆ ನೌಕರರು 7ನೇ ವೇತನ ಜಾರಿ ಮತ್ತು ಹಳೆ ಪಿಂಚಣಿ ಯೋಜನೆ ಜಾರಿಯ ಬಗ್ಗೆ ಬಹುನಿರೀಕ್ಷೆ ಇತ್ತು. ಆದರೆ ಅದನ್ನು ಹುಸಿಯಾಗಿದೆ’ ಎಂದರು.

‘ಈ ಕೂಡಲೇ 7ನೇ ವೇತನ ಜಾರಿ ಹಾಗೂ ಹಳೆ ಪಿಂಚಣಿ ಜಾರಿ ಮಾಡಬೇಕು. ಇಲ್ಲದಿದ್ದರೆ ಸಮಸ್ತ ಪಾಲಿಕೆ ನೌಕರರು ಮತ್ತು ಸ್ಥಳೀಯ ಸಂಸ್ಥೆ ನೌಕರರು ಮತ್ತು ನಗರಸಭೆ/ಪುರಸಭೆ ನೌಕರರು  ಹೋರಾಟ ನಡೆಸಲಿದ್ದಾರೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT