ಬೆಂಗಳೂರು: ವಿಪಕ್ಷಗಳಿಗೆ ಗೊಡ್ಡು ಬೆದರಿಕೆ ಹಾಕುವ ಮೂಲಕ ನಮ್ಮ ಹೋರಾಟವನ್ನು, ಪಾದಯಾತ್ರೆಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ.

ನಗರದಲ್ಲಿ ಇಂದು ನಡೆದ ಮೈಸೂರು ಪಾದಯಾತ್ರೆಯ ಪೂರ್ವ ತಯಾರಿ ಸಭೆಯ ಸಂದರ್ಭದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಉಪ ಮುಖ್ಯಮಂತ್ರಿ ಶಿವಕುಮಾರರೇ ನಿಮ್ಮ ಗೊಡ್ಡು ಬೆದರಿಕೆಗೆ ನಮ್ಮ ಕಾರ್ಯಕರ್ತರು ಅಂಜುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
.ಕೆಟ್ಟ ಸಂಪ್ರದಾಯ ಹುಟ್ಟುಹಾಕಬಾರದೆಂದು ಮುಡಾ ಚರ್ಚೆಗೆ ಅವಕಾಶ ನೀಡಿಲ್ಲ: ಖಾದರ್.
ಬಿಜೆಪಿ–ಜೆಡಿಎಸ್ನ ಉದ್ದೇಶಿತ ಪಾದಯಾತ್ರೆಗೆ ಅವಕಾಶ ನೀಡುವುದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಹೇಳಿಕೆ ನೀಡಿದ್ದರು.

ಇಡೀ ರಾಜ್ಯದ ಪರಿಶಿಷ್ಟ ಜಾತಿ, ಪಂಗಡಗಳ ಪರವಾಗಿ ನಮ್ಮ ಹೋರಾಟ ನಿರಂತರವಾಗಿ ಇರಲಿದೆ. ಪರಿಶಿಷ್ಟರ ಸಮುದಾಯದ ಹಣ ಲೂಟಿ ಮಾಡಿದ್ದಾರೆ. ಸಾವಿರಾರು ಕೋಟಿಯ ಭ್ರಷ್ಟಾಚಾರ ನಡೆಸಿದ್ದಾರೆ. ಇವುಗಳ ವಿರುದ್ಧ ಹೋರಾಟ ನಡೆಸದೆ ಇದ್ದರೆ ಭಗವಂತನೂ ನಮ್ಮನ್ನು ಕ್ಷಮಿಸುವುದಿಲ್ಲ ಎಂದು ನುಡಿದರು.
.ಮುಡಾ ಪ್ರಕರಣ | ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ: ಬಿ.ಎಸ್. ಶಿವಣ್ಣ .
ವಾಲ್ಮೀಕಿ ನಿಗಮದ ನೂರಾರು ಕೋಟಿ ಹಣವನ್ನು ಅಸ್ತಿತ್ವದಲ್ಲೇ ಇಲ್ಲದ ಕಂಪೆನಿಗಳ ಖಾತೆಗಳಿಗೆ ವರ್ಗಾಯಿಸಲಾಗಿತ್ತು. ಪರಿಶಿಷ್ಟ ಪಂಗಡಗಳಿಗೆ ಸೇರಿದ ಈ ಹಣವನ್ನು ಬಳಿಕ ಅದನ್ನು ಲೋಕಸಭಾ ಚುನಾವಣೆಯಲ್ಲಿ ದುರ್ಬಳಕೆ ಮಾಡಿದ್ದರು. ಹೆಂಡ ಖರೀದಿಯೂ ಮಾಡಿದ್ದನ್ನು ಇ.ಡಿ. ಉಲ್ಲೇಖಿಸಿದೆ ಎಂದು ಗಮನ ಸೆಳೆದರು.

ಬಿಜೆಪಿ, ವಾಲ್ಮೀಕಿ ನಿಗಮದ ಹಗರಣ ಮತ್ತು ಮೂಡಾ ಹಗರಣ ವಿರುದ್ಧ ನಿರಂತರ ಹೋರಾಟ ಮಾಡುತ್ತ ಬಂದಿದೆ. ಮುಡಾದಲ್ಲಿ ಸಿದ್ದರಾಮಯ್ಯನವರ ಕುಟುಂಬ ಪಡೆದ 14 ನಿವೇಶನಗಳು ಮುಡಾಕ್ಕೆ ವಾಪಸ್ ಬಂದು ಬಡವರಿಗೆ ಹಂಚಿಕೆ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
.ಮುಡಾ ಹಗರಣ | ಪಲಾಯನ ಮಾಡಿದ ಸಿದ್ದರಾಮಯ್ಯ: ಶಾಸಕ ಮಹೇಶ ಟೆಂಗಿನಕಾಯಿ ಟೀಕೆ.
ಮೂರರಿಂದ ನಾಲ್ಕು ಸಾವಿರ ಕೋಟಿ ಬೆಲೆಬಾಳುವ ನಿವೇಶನಗಳನ್ನು ಮನಸೋ ಇಚ್ಛೆ ಕೊಡಲಾಗಿದೆ. ಸ್ವತಃ ಸಿದ್ದರಾಮಯ್ಯನವರೇ ನೇಮಿಸಿದ ಮೂಡಾ ಅಧ್ಯಕ್ಷ ಮರಿಗೌಡರೇ ಇದನ್ನು ಬಾಯಿ ಬಿಟ್ಟಿದ್ದಾರೆ ಎಂದು ಅವರು ವಿವರಿಸಿದರು. ಇನ್ನು ಮುಂದೆ ನಿವೇಶನ ಹಂಚದಿರಲು ಕಡತದಲ್ಲಿ ಮುಡಾ ಅಧ್ಯಕ್ಷರೇ ಸೂಚಿಸಿದ್ದರು. ಜಿಲ್ಲಾಧಿಕಾರಿ ತನಿಖೆಯನ್ನೂ ಮಾಡಿಸಿದ್ದರು. ತನಿಖಾ ವರದಿಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಿದ್ದು, ಅದು ಸರಿ ಇರುವುದಾಗಿ ಸರಕಾರವೂ ಹೇಳಿತ್ತು ಎಂದು ತಿಳಿಸಿದರು.

ನಿವೇಶನ ನೀಡದಂತೆ ಸರಕಾರದ ಆದೇಶದ ನಂತರವೂ ಮುಡಾ ಕಮೀಷನರ್ ಯಥೇಚ್ಛವಾಗಿ ನಿವೇಶನ ಹಂಚಿದ್ದರು ಎಂದು ಆಕ್ಷೇಪಿಸಿದರು. ವಿಧಾನಸಭೆ, ವಿಧಾನಪರಿಷತ್ತಿನಲ್ಲಿ ನಾವು ಈ ಕುರಿತು ಒತ್ತಡ ಹೇರಿ ಚರ್ಚೆಗೆ ಅವಕಾಶ ಪಡೆದಿದ್ದೇವೆ ಎಂದು ಹೇಳಿದರು. ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ. ಬಿಜೆಪಿ ಸರಕಾರ ಇದ್ದಾಗ ಕೊಟ್ಟಿದ್ದ ಅನುದಾವನ್ನು ಸ್ಥಗಿತಗೊಳಿಸಿದ್ದಾರೆ ಎಂದು ಟೀಕಿಸಿದರು.
.‘ಮುಡಾ’ ಚರ್ಚೆಗೆ ಅವಕಾಶ ಕೆಟ್ಟ ಸಂಪ್ರದಾಯ: ಖಾದರ್.
ವಾಲ್ಮೀಕಿ ನಿಗಮದಲ್ಲಿ ₹187 ಕೋಟಿ ಅವ್ಯವಹಾರ ನಡೆದಿದೆ ಎಂದು ಯೂನಿಯನ್ ಬ್ಯಾಂಕ್, ಸಿಬಿಐಗೆ ಪತ್ರ ಬರೆದಿದೆ. ಸಿಬಿಐ ತನಿಖೆ ಮಾಡಬೇಕೆಂದು ಅದು ಕೋರಿತ್ತು ಎಂದು ತಿಳಿಸಿದರು. ಕಾನೂನಿನಡಿಯೇ ಸಿಬಿಐ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ಸರಕಾರ ರಚಿಸಿದ ಎಸ್ಐಟಿ ಎಂದರೆ ಅದು ಸಿದ್ದರಾಮಯ್ಯ ಇನ್ವೆಸ್ಟಿಗೇಶನ್ ಟೀಂ ಎಂದು ಅವರು ತಿಳಿಸಿದರು. ಅಹಿಂದ ಸಮುದಾಯಕ್ಕೆ ವಂಚಿಸುವ ಕೆಲಸವನ್ನು ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
.ಮುಡಾ | ಸಿದ್ದರಾಮಯ್ಯ ಬಣ್ಣ ಬಯಲು: ಬಸವರಾಜ ಬೊಮ್ಮಾಯಿ.
ಪಕ್ಷದ ನಾಯಕರ ನೇತೃತ್ವದಲ್ಲಿ ನೆರೆ ಪ್ರದೇಶ ವೀಕ್ಷಣಾ ತಂಡಗಳನ್ನು ರಚಿಸಲಾಗಿದೆ ಎಂದು ಅವರು ಇದೇವೇಳೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರಶ್ನೆಗೆ ಉತ್ತರವಾಗಿ ತಿಳಿಸಿದರು.

ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ, ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸುನೀಲ್ಕುಮಾರ್, ಪ್ರೀತಂ ಗೌಡ, ಕುಡಚಿ ರಾಜೀವ್, ನಂದೀಶ್ ರೆಡ್ಡಿ, ಮಾಜಿ ಸಚಿವ ಬೈರತಿ ಬಸವರಾಜ್, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಸಂಸದರು, ಮಾಜಿ ಶಾಸಕರು, ವಿಧಾನಪರಿಷತ್ ಮಾಜಿ ಸದಸ್ಯರು, ಜಿಲ್ಲಾಧ್ಯಕ್ಷರು ಮತ್ತು ಪಕ್ಷದ ಪ್ರಮುಖರು ಇದ್ದರು.
.BJP, JDS ನಾಯಕರಿಗೂ ಮುಡಾ ನಿವೇಶನ: ಪಟ್ಟಿ ಬಿಡುಗಡೆ ಮಾಡಿದ ಸಚಿವ ಬೈರತಿ ಸುರೇಶ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.